Connect with us

ಲಾರಿಗೆ ಬೈಕ್ ಡಿಕ್ಕಿ ಮಗು ಸೇರಿ ಮೂವರು ಸ್ಥಳದಲ್ಲೇ ದುರ್ಮರಣ

ಲಾರಿಗೆ ಬೈಕ್ ಡಿಕ್ಕಿ ಮಗು ಸೇರಿ ಮೂವರು ಸ್ಥಳದಲ್ಲೇ ದುರ್ಮರಣ

ಕೋಲಾರ: ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್‍ನಲ್ಲಿದ್ದ ಮೂವರು ಸಾವನ್ನಪಿರುವ ಘಟನೆ ಜಿಲ್ಲೆಯ ಆಂಧ್ರ ಗಡಿ ಚಿತ್ತೂರು ಜಿಲ್ಲೆಯ ಶಾಂತಿಪುರಂ ಬಳಿ ನಡೆದಿದೆ.

ಗುಡಪಲ್ಲಿ ಬಳಿಯ ಅಗರಂ ಮೂಲದ ನಾರಾಯಣಮ್ಮ(40), ಮಮತ(24), 2 ವರ್ಷದ ಯಶ್ವಂತಿ ಮೃತ ದುರ್ದೈವಿಗಳು. ಅಪಘಾತದಲ್ಲಿ ರಾಜಪ್ಪ ಗಂಭೀರ ಗಾಯಗೊಂಡಿದ್ದು, ಅವರನ್ನು ಸಮೀಪದ ಕುಪ್ಪಂ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಾಲ್ವರು ಒಂದೇ ಬೈಕಿನಲ್ಲಿ ಶಾಂತಿಪುರಂನಿಂದ ಕುಪ್ಪಂ ಹೋಗುತ್ತಿದ್ದರು. ಇವರ ವಿರುದ್ಧ ದಿಕ್ಕಿನಿಂದ ಲಾರಿಯೊಂದು ಕುಪ್ಪಂ ಕಡೆಗೆ ಬರುತ್ತಿತ್ತು. ಈ ಸಂದರ್ಭದಲ್ಲಿ ರಾಚಪ್ಪ ಬೈಕಿನ ನಿಯಂತ್ರಣ ಕಳೆದುಕೊಂಡು ಲಾರಿಗೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿ ಹೊಡೆದ ರಭಸಕ್ಕೆ ಮಗು ಮತ್ತು ಇಬ್ಬರು ಮಹಿಳೆಯರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ರಾಜಪ್ಪ ಅವರಿಗೆ ಗಂಭೀರವಾಗಿ ಗಾಯಗಳಾಗಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಘಟನೆ ಸಂಬಂಧ ರಾಳ್ಳ ಬೂದಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಂತರ ಲಾರಿ ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದಾನೆ. ಈ ಅಪಘಾತದಿಂದ ಸಾರ್ವಜನಿಕರು ಉದ್ರಿಕ್ತಗೊಂಡು ರತ್ನ ಮಿನರಲ್ಸ್ ಕ್ವಾರಿ ಕಚೇರಿಗೆ ನುಗ್ಗಿ ಧ್ವಂಸ ಮಾಡಿದ್ದಾರೆ. ಜೊತೆಗೆ ಲಾರಿ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ.

Advertisement
Advertisement