ತುಮಕೂರು: ಅನಾಥರಾಗಿದ್ದ ಮೂವರು ಸಹೋದರಿಯರು (Orphan Sisters) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, 9 ದಿನಗಳ ನಂತರ ಪ್ರಕರಣ ತುಮಕೂರು (Tumakuru) ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ಚಿಕ್ಕನಾಯಕನಹಳ್ಳಿ ತಾಲೂಕು, ಹುಳಿಯಾರು ಹೋಬಳಿ ಬರಕನಹಾಲ್ ತಾಂಡ್ಯದ ರಂಜಿತಾ (24), ಚಂದನಾ (21 ) ಹಾಗೂ ಬಿಂದು (18) ಆತ್ಮಹತ್ಯೆ ಮಾಡಿಕೊಂಡ ಸಹೋದರಿಯರಾಗಿದ್ದು, ಗುರುವಾರ ಸಂಜೆ ಪ್ರಕರಣ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಉದ್ಘಾಟನೆಗೆ ಸಜ್ಜಾಗಿರುವ ಧಾರವಾಡದ ಐಐಟಿಯಲ್ಲಿ ಕಳ್ಳತನ – ಐವರ ಬಂಧನ
Advertisement
Advertisement
ಹತ್ತು ವರ್ಷದ ಹಿಂದೆಯೇ ತಂದೆ-ತಾಯಿ ಕಳೆದುಕೊಂಡು ಅಜ್ಜಿಯ ಆಶ್ರಯದಲ್ಲಿದ್ದ ಮೂವರು ಯುವತಿಯರಿಗೆ ಅಜ್ಜಿಯೂ ಸಾವಿನಪ್ಪಿದ್ದು ಮಾನಸಿಕ ಖಿನ್ನತೆಗೆ ಒಳಗಾಗುವಂತೆ ಮಾಡಿತ್ತು ಎನ್ನಲಾಗಿದೆ.
Advertisement
ಇಬ್ಬರು ಕಿಬ್ಬನಹಳ್ಳಿಯ ಗಾರ್ಮೆಂಟ್ಸ್ ಒಂದರಲ್ಲಿ ಕೆಲಸ ಮಾಡಿಕೊಂಡು ಕುಟುಂಬ ಸಾಗಿಸುತ್ತಿದ್ದರು. ಬಾಲದೇವರ ಹಟ್ಟಿಯಿಂದ ಬರಕನಾಲ್ ತಾಂಡ್ಯಕ್ಕೆ ಹೋಗುವ ದಾರಿಯ ರಸ್ತೆ ಬದಿಯಲ್ಲಿರುವ ಒಂಟಿ ಮನೆಯಲ್ಲಿ ಒಂಭತ್ತು ದಿನದ ಹಿಂದೆ ನೇಣಿಗೆ ಶರಣಾಗಿದ್ದಾರೆ. ಮೃತದೇಹಗಳು ಕೊಳೆತು ವಾಸನೆ ಬಂದಾಗ ಸ್ಥಳೀಯರು ಗಮನಿಸಿ ಮನೆ ಹೆಂಚು ತೆಗೆದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಇದನ್ನೂ ಓದಿ: 6 ವರ್ಷದ ಪ್ರೀತಿಗೆ ಬಿತ್ತು ಬ್ರೇಕ್- ನೇಣಿಗೆ ಶರಣಾದ ಯುವಕ
Advertisement
ಎಎಸ್‌ಪಿ ಸಿದ್ದಾರ್ಥ್ ಗೋಯಲ್, ಸಿಪಿಐ ನಿರ್ಮಲಾ, ಪಿಎಸ್ಐ ಮೂರ್ತಿ ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k