ಬೀದರ್: ವಕೀಲನ ಮೇಲೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ ಮೂವರು ಆರೋಪಿಗಳನ್ನು ಬಂಧಿಸಿ ಬೀದರ್ (Bidar) ಪೊಲೀಸರು ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ.
ಜಮೀನು ಖರೀದಿ ಮಾಡುವ ವಿಚಾರಕ್ಕೆ ಹಲ್ಲೆ ಮಾಡಿದ ಒಟ್ಟು ಆರು ಜನ ಆರೋಪಿಗಳಲ್ಲಿ ಮೂವರನ್ನು ಬಂಧಿಸಿದ್ದು, ಪರಾರಿಯಾಗಿರುವ ಮೂವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಅರೆಸ್ಟ್ ಆಗಲೇಬೇಕು: ಜೋಶಿ
ಕೃತ್ಯಕ್ಕೆ ಬಳಸಿದ್ದ ಕಾರು, ಖಾರದ ಪುಡಿ ಹಾಗೂ ತಲ್ವಾರ್ ಸೇರಿದಂತೆ ಮಾರಕಾಸ್ತ್ರಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಐದು ಲಕ್ಷ ರೂ. ಹಣ ನೀಡಿ ಜಮೀನು ಮಾಲೀಕ ಕೊಲೆಗೆ ಸುಪಾರಿ ನೀಡಿದ್ದು, ಆರು ಜನ ಆರೋಪಿಗಳು ಬೀದರ್ ಜಿಲ್ಲೆಯವರಾಗಿದ್ದಾರೆ. ವಕೀಲನ ಕೊಲೆಗೆ ಸುಪಾರಿ ಕೊಟ್ಟವರು ನಾಪತ್ತೆಯಾಗಿದ್ದಾರೆ.
ಏಪ್ರಿಲ್ 28 ರಂದು ಕಣ್ಣಿಗೆ ಖಾರದ ಪುಡಿ ಹಾಕಿ ಜಾಬ್ ಶೆಟ್ಟಿ ಎಂಬ ವಕೀಲನ ಮೇಲೆ ಹಲ್ಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದರು. ಕೊಲೆಗೆ ಯತ್ನ ಮಾಡಿದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರಿಗೆ ಎಸ್ಪಿ ಚೆನ್ನಬಸವಣ್ಣ ಲಂಗೋಟಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಜೆಪಿ ನಡ್ಡಾ ವಿರುದ್ಧ ದೂರು-ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು