ತುಮಕೂರು: ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಕೆಎಸ್ಆರ್ ಟಿಸಿ ಬಸ್ಸಿಗೆ ಹಿಂಬದಿಯಿಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೂವರು ಮೃತಪಟ್ಟಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಈ ಅಪಘಾತ ಶಿರಾ ತಾಲೂಕಿನ ರಾಷ್ಟೀಯ ಹೆದ್ದಾರಿ 4ರ ಕಳ್ಳಂಬೆಳ್ಳ ಬಳಿ ಇಂದು ಮುಂಜಾನೆ ಸಂಭವಿಸಿದೆ. ನಿಖಿತಾ (27), ಧನರಾಜ್ (45) ಮತ್ತು ಕಾರವಾರದ ಪರಮೇಶ್ವರ್ ನಾಯ್ಕ್ (50) ಮೃತ ದುರ್ದೈವಿಗಳು. ಇನ್ನಿಬ್ಬರನ್ನು ಬೆಂಗಳೂರು ಮೂಲದವರು ಎಂದು ಗುರುತಿಸಲಾಗಿದೆ.
Advertisement
ಎರಡು ಬಸ್ ಚಿತ್ರದುರ್ಗದಿಂದ ಬೆಂಗಳೂರಿನತ್ತ ಬರುತ್ತಿದ್ದವು. ಈ ವೇಳೆ ಕಳ್ಳಂಬೆಳ್ಳ ಬಳಿ ವೇಗವಾಗಿ ಬಂದು ಹಿಂಬದಿಯಿಂದ ಕೆಎಸ್‍ಆರ್ ಟಿಸಿ ಬಸ್ಸಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಖಾಸಗಿ ಬಸ್ಸಿನಲ್ಲಿದ್ದ ಇಬ್ಬರು ಹಾಗೂ ಕೆಎಸ್ಆರ್ ಟಿಸಿ ಬಸ್ಸಿನಲ್ಲಿದ್ದ ಓರ್ವ ಸಾವನ್ನಪ್ಪಿದ್ದಾರೆ. ಈ ಅಪಘಾತದಿಂದ 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ತುಮಕೂರು ಜಿಲ್ಲಾ ಆಸ್ಪತ್ರೆ ಹಾಗೂ ಬೆಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
Advertisement
ಈ ಘಟನೆ ಸಂಬಂಧ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv