ಬೆಂಗಳೂರು: ಚಾಲಕನ ನಿರ್ಲಕ್ಷ್ಯ ಹಾಗೂ ಅತೀ ವೇಗದ ಚಾಲನೆಯಿಂದ ಇಂಡಿಕಾ ಕಾರೊಂದು ಹೆದ್ದಾರಿ ಸೇತುವೆಯ ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸಂಭವಿಸಿದೆ.
ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ತಾಳೆಕೆರೆ ಹ್ಯಾಂಡ್ ಪೋಸ್ಟ್ ಬಳಿ ಈ ಘಟನೆ ನಡೆದಿದ್ದು, ಜಗದೀಶ್ (55), ಜೈಶಂಕರ್ (45) ಹಾಗೂ ಸುರೇಶ್ (24) ಮೃತ ದುರ್ದೈವಿಗಳು. ಲಾನ್‍ಮಾನ್ ಯಾದವ್ ಎಂಬವರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಮೃತರು ಮೂಲತಃ ಉತ್ತರ ಪ್ರದೇಶ ರಾಜ್ಯದವರಾಗಿದ್ದು, ಬೆಂಗಳೂರಿನ ಆರ್.ಟಿ ನಗರದಲ್ಲಿ ವಾಸವಾಗಿದ್ದರು ಎಂದು ತಿಳಿದು ಬಂದಿದೆ. ನಾಲ್ವರು ಇಂಡಿಕಾ ಕಾರಿನಲ್ಲಿ ಹಾಸನ ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಂಗಳೂರಿಗೆ ಬರುತ್ತಿದ್ದರು. ಚಾಲಕನ ನಿರ್ಲಕ್ಷ್ಯ ಹಾಗೂ ಅತೀ ವೇಗದ ಚಾಲನೆಯಿಂದ ಕಾರು ನೆಲಮಂಗಲ ಸಮೀಪದ ತಾಳೆಕೆರೆ ಹ್ಯಾಂಡ್ ಪೋಸ್ಟ್ ಬಳಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಸದ್ಯ ಘಟನೆಗೆ ಸಂಬಂಧಿಸಿದಂತೆ ಕುದೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv