Connect with us

Bagalkot

ಮೀನು ಹಿಡಿಯಲು ಹೋಗಿ ನೀರು ಪಾಲಾದ್ರು!

Published

on

ಬಾಗಲಕೋಟೆ: ಮೀನು ಹಿಡಿಯಲು ಹೋಗಿ ಮೂವರು ನೀರುಪಾಲಾದ ಘಟನೆ ಜಿಲ್ಲೆಯ ಮುಧೋಳ ತಾಲೂಕಿನ ಯಡಳ್ಳಿ ಗ್ರಾಮದ ಬಳಿಯ ಘಟಪ್ರಭಾ ನದಿಯಲ್ಲಿ ನಡೆದಿದೆ.

ಪರಶುರಾಮ(27), ಕೈಲಾಸ್ ವಾಗ್ಮೋರೆ(30) ಮತ್ತು ರಾಮಕೃಷ್ಣ(42) ಮೃತ ದುರ್ದೈವಿಗಳು. ಮೂವರು ಮಹಾರಾಷ್ಟ್ರ ಮೂಲದವರಾಗಿದ್ದು, ಕಬ್ಬು ಕಡಿಯುವ ಕಾರ್ಮಿಕರೆಂದು ತಿಳಿದು ಬಂದಿದೆ. ಈ ಮೂವರು ಶನಿವಾರ ಸಂಜೆ ವೇಳೆ ಘಟಪ್ರಭಾ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದಾರೆ. ಆದರೆ ಮೀನು ಹಿಡಿಯಲು ಹೋಗಿ ಈಜು ಬಾರದೆ ಮೂವರು ನೀರು ಪಾಲಾಗಿ ಮೃತಪಟ್ಟಿದ್ದಾರೆ.

ಈ ಬಗ್ಗೆ ಸ್ಥಳದಲ್ಲಿದ್ದವರು ಮುಧೋಳ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಬಳಿಕ ಮೂವರ ಮೃತದೇಹಕ್ಕಾಗಿ ಹುಡುಕಾಟ ನಡೆಸಿ ಕೊನೆಗೆ ಶವಗಳನ್ನು ಹೊರತೆಗೆದಿದ್ದಾರೆ.

ಸದ್ಯಕ್ಕೆ ಮುಧೋಳ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Click to comment

Leave a Reply

Your email address will not be published. Required fields are marked *