ವಿಜಯಪುರ: ಕೆಎಸ್‍ಆರ್‌ಟಿಸಿ ಬಸ್ ಮತ್ತು 2 ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರಿಗೆ ಗಂಭೀರ ಗಾಯವಾಗಿದೆ.
ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಕುಪಕಡ್ಡಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 218ರಲ್ಲಿ ಅಪಘಾತ ಸಂಭವಿಸಿದೆ. ಕಲಬುರಗಿ ಮೂಲದ ಕಿಯಾ ಕಾರಿನಲ್ಲಿದ್ದ 7 ಜನರ ಪೈಕಿ ಇಬ್ಬರು ಮಹಿಳೆಯರು, ಓರ್ವ ಮಗು ಸಾವನ್ನಪ್ಪಿದೆ. ಮತ್ತೊಂದು ಬಲೇನೋ ಕಾರಿನಲ್ಲಿದ್ದ ವಿಜಯಪುರ ಮೂಲದವರಿಗೆ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಇದನ್ನೂ ಓದಿ: ಸ್ವಾಮೀಜಿಗಳ ಲೈಂಗಿಕ ದೌರ್ಜನ ಆರೋಪದ ಕೇಸನ್ನು ಸಿಬಿಐಗೆ ಒಪ್ಪಿಸಿ: ಹಿಂದುಸ್ತಾನ್ ಜನತಾ ಪಕ್ಷ ಒತ್ತಾಯ
ಮೃತರನ್ನು ಕಲಬುರಗಿ ಜಿಲ್ಲೆಯ ಮೂಲದಕಲಶೆಟ್ಟಿ ಕುಟುಂಬದ ಸುನಂದಾ ಮಲ್ಲಿಕಾರ್ಜುನ ಕಲಶೆಟ್ಟಿ(25) ಸುನಂದಾ ಅವರ ಮೂರು ತಿಂಗಳ ಮಗಳು ಸುಮನ್ ಹಾಗೂ ಶರಣಮ್ಮ ಬಸವರಾಜ ಕಲಶೆಟ್ಟಿ(55) ಎಂದು ಗುರುತಿಸಲಾಗಿದೆ. ಅಲ್ಲದೇ ಇದೇ ಕಾರಿನಲ್ಲಿದ್ದ ಕಾರು ಚಾಲಕ, ಇಬ್ಬರು ಮಕ್ಕಳು ಹಾಗೂ ಓರ್ವ ಮಹಿಳೆಗೆ ಗಂಭೀರ ಗಾಯವಾಗಿದೆ.
ಘಟನೆಯಲ್ಲಿ ಸುಹಾನ್ ಕಲಶೆಟ್ಟಿ, ಸಾನ್ವಿ ಕಲಶೆಟ್ಟಿ, ಉಮೇಶ ಕಲಶೆಟ್ಟಿ ಹಾಗೂ ಸುರೇಖಾ ಕಲಶೆಟ್ಟಿಗೆ ಗಂಭೀರ ಗಾಯಗೊಂಡಿದ್ದು, ಇದೀಗ ಗಾಯಾಳುಗಳನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸದ್ಯ ಈ ಸಂಬಂಧ ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಇಂದು ತನಿಖಾಧಿಕಾರಿ ಕೈಗೆ ವಿದ್ಯಾರ್ಥಿನಿಯರ ಹೇಳಿಕೆ – ಮುರುಘಾ ಶ್ರೀಗೆ ಸಿಗುತ್ತಾ ಜಾಮೀನು..?