– ಇನ್ನಿಬ್ಬರಿಗಾಗಿ ಮುಂದುವರಿದ ಶೋಧ ಕಾರ್ಯ
ವಿಜಯಪುರ: ಮುದ್ದೇಬಿಹಾಳ (Muddebihal) ತಾಲೂಕಿನ ಶಿರೋಳ ಗ್ರಾಮದ ಬಳಿಯ ಕೆಬಿಜೆಎನ್‌ಎಲ್ ಎಡದಂಡೆ ಕಾಲುವೆಯಲ್ಲಿ ಕಾಲು ಜಾರಿ ಬಿದ್ದು ಮೂವರು ನೀರುಪಾಲಾಗಿದ್ದು, ಓರ್ವ ಬಾಲಕನ ಶವ ಪತ್ತೆಯಾಗಿದೆ.
ಮುದ್ದೇಬಿಹಾಳ ಪಟ್ಟಣದ ಆಶ್ರಯ ಕಾಲೋನಿಯ ಸುಡಗಾಡು ಸಿದ್ದ ಸಮುದಾಯದ ಬಸಮ್ಮ ಕೊಣ್ಣೂರ (21), ಸಂತೋಷ ಕೊಣ್ಣೂರು (16) ಹಾಗೂ ರವಿ ಕೊಣ್ಣೂರು (15) ಮೂವರು ನೀರುಪಾಲಾಗಿದ್ದಾರೆ. ಇದನ್ನೂ ಓದಿ:ಥೂ…ಥೂ…ಥೂ… ಬಿಗ್‌ಬಾಸ್ ಮನೆಯಲ್ಲಿ `ಥೂ’ ಆರ್ಭಟ
ಒಂದೇ ಕುಟುಂಬದವರಾಗಿದ್ದು, ಸ್ಥಳಕ್ಕೆ ಮುದ್ದೇಬಿಹಾಳ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಇನ್ನೂ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿದ್ದು, ಶೋಧಕಾರ್ಯ ಮುಂದುವರಿದಿದೆ. ಸದ್ಯ ಬಾಲಕ ಸಂತೋಷನ ಶವ ಪತ್ತೆಯಾಗಿದ್ದು, ಇನ್ನಿಬ್ಬರಿಗಾಗಿ ಕಾರ್ಯಾಚರಣೆ ಮುಂದುವರಿದಿದೆ.

