ಮಂಗಳೂರು: ನಗರದ ನೆಹರೂ ಮೈದಾನದಲ್ಲಿ ವಾಕಿಂಗ್ ಮಾಡುತ್ತಿದ್ದ ನಾಗರಿಕರ ಮೊಬೈಲ್, ಎಟಿಎಂ ಕಾರ್ಡ್ ಕಸಿದುಕೊಂಡು ಸುಲಿಗೆ ಮಾಡುತ್ತಿದ್ದ ಗಂಭೀರ ಆರೋಪದಲ್ಲಿ ಮೂವರು ಪೊಲೀಸರನ್ನು ಬಂಧಿಸಲಾಗಿದ್ದು, ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ತಿಳಿದು ಬಂದಿದೆ.
ಪಾಂಡೇಶ್ವರ ಠಾಣೆಯ ಹೆಡ್ಕಾನ್ಸ್ಟೇಬಲ್ ಈರಣ್ಣ ಬೆನ್ನಿ, ಪೊಲೀಸ್ ಕಾನ್ಸ್ಟೇಬಲ್ಗಳಾದ ಶಿವರಾಜ್ ಮತ್ತು ಉಮಾನಾಥ್ ಎಂಬವರು ಸುಲಿಗೆ ಮಾಡಿರುವ ಬಗ್ಗೆ ಬಂದ ದೂರಿನ ಮೇರೆಗೆ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂಓದಿ: ತುಂಡಾಗಿ ಬಿದ್ದಿದ್ದ ಹೈಟೆನ್ಷನ್ ವಿದ್ಯುತ್ ತಂತಿ ತುಳಿದು ಯುವಕ ಸಾವು
ರಾತ್ರಿ ವೇಳೆ ಸಾರ್ವಜನಿಕರ ರಕ್ಷಣೆ ಮತ್ತು ಗಸ್ತು ಕರ್ತವ್ಯಕ್ಕೆ ನಿಯೋಜಿಸಲಾಗಿದ್ದ ಪೊಲೀಸ್ ಹೊಯ್ಸಳ ವಾಹನದಲ್ಲೇ ಬಂದು, ಸಾರ್ವಜನಿಕರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿ ದರೋಡೆಗೆ ಯತ್ನಿಸಿದ್ದರು ಎನ್ನಲಾಗಿದೆ.
ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿ, ಆರೋಪಿಗಳು ಸಾರ್ವಜನಿಕರನ್ನು ದರೋಡೆ ಮಾಡಲು ಯತ್ನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಅವರನ್ನೆಲ್ಲಾ ಈಗಾಗಲೇ ಬಂಧಿಸಲಾಗಿದೆ ಎಂದರು. ಇದನ್ನೂ ಓದಿ: ಫ್ಯಾಮಿಲಿಯ ಮದುವೆಗಾಗಿ ಸಿಂಗಾಪುರದಿಂದ ಬಂದಿದ್ದ ಟೆಕ್ ಮಹೀಂದ್ರಾ ಏಷ್ಯಾ ಹೆಡ್ ಗುಂಡಿನ ದಾಳಿಗೆ ಬಲಿ
