ಬೆಂಗಳೂರು: ವಿಧಾನಸೌಧದಲ್ಲಿ ಇಂದು ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ (CLP Meeting) ಪ್ರಮುಖ ಮೂರು ನಿರ್ಣಗಳನ್ನು ಅಂಗೀಕರಿಸಲಾಯಿತು.
* ಮೊದಲ ನಿರ್ಣಯ
ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯಲ್ಲಿ ಮೊದಲ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು. ಹೊಸ CLP ನಾಯಕರ ಆಯ್ಕೆಯನ್ನು ಕಾಂಗ್ರೆಸ್ ಹೈಕಮಾಂಡ್‌ಗೆ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ಣಯ ಮಂಡಿಸಿದರು. ಡಾ. ಜಿ.ಪರಮೇಶ್ವರ್ ಅವರು ಅನುಮೋದನೆ ನೀಡಿದರು. ಸಭೆಯಲ್ಲಿದ್ದ ಎಲ್ಲಾ ಶಾಸಕರು ಕೈ ಎತ್ತುವ ಮೂಲಕ ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಿದರು. ಇದನ್ನೂ ಓದಿ: ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ

* ಎರಡನೇ ನಿರ್ಣಯ
ಸಿದ್ದರಾಮಯ್ಯ ಅವರು ಡಿ.ಕೆ.ಶಿವಕುಮಾರ್ ಅವರ ಹೆಸರನ್ನು ಹೊಸ CLP ನಾಯಕರಾಗಿ ಪ್ರಸ್ತಾಪಿಸಿದರು. ಡಾ. ಪರಮೇಶ್ವರ್ ಅವರು ಅನುಮೋದನೆ ನೀಡಿದರು. ಡಿ.ಕೆ. ಶಿವಕುಮಾರ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
* ಮೂರನೇ ನಿರ್ಣಯ
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರ ಸೇವೆ ಮತ್ತು ನಾಯಕತ್ವವನ್ನು ಶ್ಲಾಘಿಸಿ ಧನ್ಯವಾದ ನಿರ್ಣಯ ಮಂಡಿಸಿದರು. ಶಾಸಕರು ಅನುಮೋದಿಸಿದರು. ಇದನ್ನೂ ಓದಿ: ಮಾಜಿ ಸಚಿವ ವೆಂಕಟರಮಣಪ್ಪ ಅಂತಿಮ ದರ್ಶನ ಪಡೆದ ಸಿದ್ದರಾಮಯ್ಯ
