ಮಂಗಳೂರು: ನೀರಿನಲ್ಲಿ ಆಟವಾಡಲೆಂದು ಟ್ಯಾಂಕಿಗೆ ಇಳಿದ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪಾಣಾಜೆ ಸಮೀಪದ ಉಡ್ಡಂಗಳದಲ್ಲಿ ನಡೆದಿದೆ.
ಜಿತೇಶ್ (13), ಬಾಲಕಿಯರಾದ ವಿಷ್ಮಿತ (13), ಚೈತ್ರ (10) ಮೃತ ವಿದ್ಯಾರ್ಥಿಗಳಾಗಿದ್ದು, ಶಾಲೆಗೆ ರಜೆ ಹಿನ್ನೆಲೆಯಲ್ಲಿ ಪಂಚಾಯತಿಗೆ ಸೇರಿದ ಟ್ಯಾಂಕಿಯಲ್ಲಿ ಆಟವಾಡಲೆಂದು ತೆರಳಿದ್ದ ವೇಳೆ ಘಟನೆ ನಡೆದಿದೆ ಎಂಬ ಮಾಹಿತಿ ಲಭಿಸಿದೆ.
Advertisement
ಮೃತರೆಲ್ಲರೂ ಬೆಟ್ಟಂಪಾಡಿಯ ಮಿತ್ತಡ್ಕ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಾಗಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದು ಸ್ಥಳಕ್ಕೆ ಪುತ್ತೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.