ಬೆಂಗಳೂರು: ಶಾಲಾ ಕಟ್ಟಡ ಕುಸಿದು ಗಾಯಗೊಂಡಿದ್ದ ಮೂವರ ಪೈಕಿ ಹೊಸ್ಮಟ್ ಆಸ್ಪತೆಯಲ್ಲಿ ದಾಖಲಾಗಿರುವ ಓರ್ವ ವಿದ್ಯಾರ್ಥಿಯನ್ನು ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ (Madhu Bangarappa) ಅವರು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು.
ದೇವನಹಳ್ಳಿ (Devanahalli) ಪಟ್ಟಣದ ಕೋಟೆ ಸರ್ಕಾರಿ ಬಾಲಕರ ಶಾಲೆಯ ಕಟ್ಟಡ ಕುಸಿದು ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದರು. ಓರ್ವ ವಿದ್ಯಾರ್ಥಿ ಹೊಸ್ಮಟ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆತನನ್ನು ಭೇಟಿಯಾದರು. ಈ ವೇಳೆ ವೈದ್ಯರೊಂದಿಗೆ ಚರ್ಚಿಸಿ ಸಂಪೂರ್ಣ ಮಾಹಿತಿ ಪಡೆದು, ವಿದ್ಯಾರ್ಥಿಗೆ ಸೂಕ್ತ ಚಿಕಿತ್ಸೆ ನೀಡಲು ಕೋರಿದರು. ನಂತರ ಗಾಯಾಳು ವಿದ್ಯಾರ್ಥಿ ಹಾಗೂ ಅವರ ಕುಟುಂಬಸ್ಥರಿಗೆ ಧೈರ್ಯ ತುಂಬಿದರು.ಇದನ್ನೂ ಓದಿ: ಬುರುಡೆ ಗ್ಯಾಂಗ್ ಷಡ್ಯಂತ್ರ ಬಯಲು | ದಯವಿಟ್ಟು ನನ್ನನ್ನು ಬಿಟ್ಟುಬಿಡಿ, ಸತ್ಯ ಹೇಳ್ತೀನಿ – ಚಿನ್ನಯ್ಯ ಕಣ್ಣೀರು
ಇದೇ ವೇಳೆ ಗಾಯಾಳು ಮಕ್ಕಳ ಎಲ್ಲಾ ವೈದ್ಯಕೀಯ ವೆಚ್ಚವನ್ನು ಶಿಕ್ಷಣ ಇಲಾಖೆ ಭರಿಸುತ್ತದೆ ಹಾಗೂ ವಿದ್ಯಾರ್ಥಿಗಳ ಆರೋಗ್ಯವನ್ನು ಅಧಿಕಾರಿಗಳು 24 ಗಂಟೆಗಳ ಕಾಲ ನಿಗಾವಹಿಸಬೇಕು ಎಂದು ಸೂಚಿಸಿದರು.
ಗಾಯಗೊಂಡ ಇನ್ನೋರ್ವನನ್ನು ಹೆಚ್ಚಿನ ಚಿಕಿತ್ಸೆಗೆ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಈ ಮುನ್ನ ಬೋರಿಂಗ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಓರ್ವ ವಿದ್ಯಾರ್ಥಿಯನ್ನು ಈಗಾಗಲೇ ಡಿಸ್ಚಾರ್ಜ್ ಮಾಡಲಾಗಿದೆ.
ಸಚಿವರು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಶಾಲಾ ಕಟ್ಟಡವನ್ನು ಸಂಪೂರ್ಣ ಪರಿಶೀಲಿಸಿ ವರದಿ ಸಲ್ಲಿಸಲು ಆದೇಶಿಸಿದರು. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಸಿಇಒ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮಕ್ಕಳ ಆರೋಗ್ಯ ಮತ್ತು ಭದ್ರತೆ ಸರ್ಕಾರದ ಪ್ರಮುಖ ಜವಾಬ್ದಾರಿ. ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ ಮತ್ತೆ ಮೇಘಸ್ಫೋಟ – ಹಠಾತ್ ಪ್ರವಾಹಕ್ಕೆ 10ಕ್ಕೂ ಹೆಚ್ಚು ಮನೆಗಳು ನಾಶ