ಶಿವಮೊಗ್ಗ: ತುಂಗಾ ನದಿಯಲ್ಲಿ (Tunga River) ಈಜಲು (Swimming) ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲಾದ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ.
ರಂಜಾನ್ ಉಪವಾಸ (Fasting) ಮುಗಿಸಿ ಮೂವರು SSLC ವಿದ್ಯಾರ್ಥಿಗಳು ಈಜಲು ತುಂಗಾನದಿಗೆ ತೆರಳಿದ್ದ ವೇಳೆ ದುರಂತ ಸಂಭವಿಸಿದೆ. ಮೃತ ವಿದ್ಯಾರ್ಥಿಗಳನ್ನು ರಫನ್, ಇಯನ್ ಹಾಗೂ ಸಮ್ಮರ್ ಎಂದು ಗುರುತಿಸಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯ ಪೊಲೀಸರು ಮೂವರು ವಿದ್ಯಾರ್ಥಿಗಳ ಮೃತದೇಹವನ್ನು ನದಿಯಿಂದ ಹೊರತೆಗೆದಿದ್ದಾರೆ. ಇದನ್ನೂ ಓದಿ: ಮುಂದಿನ 3 ತಿಂಗಳು ಕಾಡಲಿದೆ ರಣಬಿಸಿಲು – ಉತ್ತರ ಒಳನಾಡಿಗೆ ಉಷ್ಣಗಾಳಿಯ ಕೆಟ್ಟ ಪರಿಣಾಮ
Advertisement
Advertisement
ತೀರ್ಥಹಳ್ಳಿ ಪಟ್ಟಣದ ತುಂಗಾ ನದಿಯ ರಾಮ ಮಂಟಪದ ಬಳಿ ಘಟನೆ ನಡೆದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಈ ಕುರಿತು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ತಡರಾತ್ರಿ ಬೆಂಗಳೂರಿಗೆ ಆಗಮಿಸಿದ ಅಮಿತ್ ಶಾ
Advertisement