ಬೆಂಗಳೂರು: ನಗರದ ಪ್ರತಿಷ್ಠಿತ ಕಾಲೇಜೊಂದರಲ್ಲಿ ಪಾಕಿಸ್ತಾನ (Pakistan) ಪರ ಘೋಷಣೆ ಕೂಗಿದ್ದ ಮೂವರು ವಿದ್ಯಾರ್ಥಿಗಳನ್ನು ಪೊಲೀಸರು ಬಿಡುಗಡೆಗೊಳಿಸಿದ್ದಾರೆ.
ಕಾಲೇಜಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಆಂಧ್ರ ಪ್ರದೇಶ ಮೂಲದ ಆರ್ಯನ್, ಮಹಾರಾಷ್ಟ್ರ ಮೂಲದ ರಿಯಾ ರವಿಚಂದ್ರನ್ ಮತ್ತು ಪಂಜಾಬ್‍ನ ದಿನಕರ್ ಪಾಕಿಸ್ತಾನ ಜಿಂದಾಬಾದ್ (Pakistan zindabad) ಎಂದು ಪಾಕ್ ಪರ ಘೋಷಣೆ ಕೂಗಿದ್ದರು. ನಂತರ ಈ ಮೂವರು ವಿದ್ಯಾರ್ಥಿಗಳನ್ನು ಬಂಧಿಸಿ ಮಾರತಹಳ್ಳಿ ಪೊಲೀಸರು ಐಪಿಸಿ ಸೆಕ್ಷನ್ 153, 505(1) ಅಡಿಯಲ್ಲಿ ಎಫ್‍ಐಆರ್ ದಾಖಲಿಸಿದ್ದರು.
Advertisement
Advertisement
ಈ ಘಟನೆಯ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆಯೇ ಕಾಲೇಜು ಆಡಳಿತ ಮಂಡಳಿ ಮೂವರು ವಿದ್ಯಾರ್ಥಿಗಳನ್ನು ಸಸ್ಪೆಂಡ್ ಮಾಡಿದ್ದರು ಮತ್ತು ತಮಾಷೆಗಾಗಿ ಪಾಕ್ ಪರ ಘೋಷಣೆ ಕೂಗಿರುವುದಾಗಿ ವಿದ್ಯಾರ್ಥಿಗಳು ಹೇಳಿದ್ದರು. ಇದನ್ನೂ ಓದಿ: ಬೆಂಗ್ಳೂರಿನ ಕಾಲೇಜಿನಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ವಿದ್ಯಾರ್ಥಿಗಳು – ಮೂವರು ವಶಕ್ಕೆ
Advertisement
Advertisement
ಕಾಲೇಜಿನಲ್ಲಿ ಐಪಿಎಲ್ ಕ್ರಿಕೆಟ್ ಟೀಂ ಪರ ಜೈಕಾರ ಕೂಗುತ್ತಿದ್ದ ವೇಳೆ ಪೈಪೋಟಿಗೆ ಬಿದ್ದು ಪಾಕ್ ಪರ ಘೋಷಣೆ ಕೂಗಿದ್ದು, ಉದ್ದೇಶ ಪೂರ್ವಕವಾಗಿ ಕೂಗಿಲ್ಲ ಎಂಬ ವಿಚಾರ ತಿಳಿದು ಬಂದಿದ್ದು, ಸದ್ಯ ಬಂಧಿತರನ್ನು ಬಿಡುಗಡೆ ಮಾಡಲಾಗಿದೆ. ಇಂದು ವಿಚಾರಣೆಗೆ ಹಾಜರಾಗುವಂತೆ ಪೊಲೀಸರ ಸೂಚಿಸಿದ್ದಾರೆ.