ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಬಾರಾಮುಲ್ಲಾ ಜಿಲ್ಲೆಯಲ್ಲಿ ಬೆಳಗ್ಗೆ ಭದ್ರತಾ ಪಡೆಗಳು (Indian Army) ನಡೆಸಿದ ಎನ್‍ಕೌಂಟರ್‌ನಲ್ಲಿ (Encounter) ಮೂವರು ಭಯೋತ್ಪಾದಕರು ಹತರಾಗಿದ್ದಾರೆ
ಭಯೋತ್ಪಾದಕರ ಇರುವಿಕೆ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ಶುಕ್ರವಾರ ತಡರಾತ್ರಿ ಆರಂಭಿಸಿದ್ದರು. ಬಳಿಕ ಉತ್ತರ ಕಾಶ್ಮೀರ ಜಿಲ್ಲೆಯ ಪಟ್ಟಾನ್ ಪ್ರದೇಶದ ಚಕ್ ತಾಪರ್ ಕ್ರೀರಿಯಲ್ಲಿ ಗುಂಡಿನ ಚಕಮಕಿ ಆರಂಭಗೊಂಡಿತು.
Advertisement
#????????????????????????????????????????
???????? ????????????????????????????????
In the Joint operation launched on 11 Sep by ???????????????????????? ???????? ???????????????????????? ???????????????? ???????????????????? & ????&???? ????????????????????????, Two Terrorists Neutralised & Large War Like Stores Recovered. ????????????????????????????????????????… pic.twitter.com/SE4bfRVmNL
— Rising Star Corps_IA (@RisingStarCorps) September 13, 2024
Advertisement
ಪ್ರತ್ಯೇಕ ಎನ್‍ಕೌಂಟರ್‌ನಲ್ಲಿ ಸೇನೆಯ ರೈಸಿಂಗ್ ಸ್ಟಾರ್ ಕಾರ್ಪ್ಸ್‌ನ ಘಟಕದ ಪಡೆಗಳು ಶುಕ್ರವಾರ ಕಥುವಾದಲ್ಲಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದವು, ಈ ಮೂಲಕ ಒಟ್ಟು ಐವರು ಉಗ್ರರು ಹತರಾಗಿದ್ದಾರೆ.
Advertisement
Advertisement
ಕಾರ್ಯಾಚರಣೆ ಬಳಿಕ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಸೇನೆ ವಶಕ್ಕೆ ಪಡದಿದೆ.
ಗುಂಡಿನ ಚಕಮಕಿಯಲ್ಲಿ ನಾಲ್ವರು ಸೇನಾ ಸಿಬ್ಬಂದಿ ಗಾಯಗೊಂಡಿದ್ದರು. ಅವರಲ್ಲಿ ಇಬ್ಬರು ಜೆಸಿಒ ನೈಬ್ ಸುಬೇದಾರ್ ವಿಪನ್ ಕುಮಾರ್ ಮತ್ತು ಸಿಪಾಯಿ ಅರವಿಂದ್ ಸಿಂಗ್ ಹುತಾತ್ಮರಾಗಿದ್ದಾರೆ.