ಬ್ರೆಸಿಲಿಯಾ: ಕ್ಯಾನ್ಸರ್ ಕಾಯಿಲೆ, ಮೂತ್ರಪಿಂಡ (ಕಿಡ್ನಿ) ಸಮಸ್ಯೆ ಹಾಗೂ ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದ ಫುಟ್ಬಾಲ್ ದಂತಕತೆ (Football Legendary), ಸಾರ್ವಕಾಲಿಕ ಶ್ರೇಷ್ಠ ಆಟಗಾರ ಬ್ರೆಜಿಲ್‌ನ (Brazil) ಪೀಲೆ (82) (Pele) ನಿಧನರಾಗಿದ್ದಾರೆ.
A inspiração e o amor marcaram a jornada de Rei Pelé, que faleceu no dia de hoje.
Amor, amor e amor, para sempre.
.
Inspiration and love marked the journey of King Pelé, who peacefully passed away today.
Love, love and love, forever. pic.twitter.com/CP9syIdL3i
— Pelé (@Pele) December 29, 2022
Advertisement
ಮೂರು ಬಾರಿ ಫಿಫಾ ವಿಶ್ವಕಪ್ (FIFA World Cup) ವಿಜೇತ ಪೀಲೆ ಅವರು, ನ.29ರಂದು ಆಸ್ಪತ್ರೆಗೆ (Hospital) ದಾಖಲಾಗಿದ್ದರು. ಇತ್ತೀಚೆಗೆ ಅವರಿಗೆ ಕೋವಿಡ್-19 (Covid) ಸೋಂಕು ತಗಲಿತ್ತು. ಇದನ್ನೂ ಓದಿ: ರಣಜಿಯಲ್ಲಿ ಬ್ಯಾಟಿಂಗ್ ಅಬ್ಬರ- ಮನೀಷ್ ದ್ವಿಶತಕ ಮಿಂಚಿಂಗ್, ಸೂರ್ಯನಿಗೆ ಶತಕ ಮಿಸ್ಸಿಂಗ್
Advertisement
Advertisement
ತನ್ನ 16ನೇ ವಯಸ್ಸಿನಲ್ಲಿ ಬ್ರೆಜಿಲ್ ರಾಷ್ಟ್ರೀಯ ತಂಡದ ಪರ ಆಡಲು ಆರಂಭಿಸಿದ ಪೀಲೆ 1958, 1962 ಹಾಗೂ 1970ರಲ್ಲಿ ಬ್ರೆಜಿಲ್ ಫಿಫಾ ವಿಶ್ವಕಪ್ (FIFA World Cup) ಜಯಿಸಲು ಪ್ರಮುಖ ಪಾತ್ರವಹಿಸಿದ್ದರು. ಈ ಸಾಧನೆ ಮಾಡಿದ ಏಕೈಕ ಆಟಗಾರನಾಗಿದ್ದಾರೆ. ಬ್ರೆಜಿಲ್ ಪರ 95 ಪಂದ್ಯಗಳಲ್ಲಿ ಅತಿಹೆಚ್ಚು 77 ಗೋಲುಗಳನ್ನು ಗಳಿಸಿರುವ ಸಾಧನೆ ಮಾಡಿದ್ದರು. ಆದ್ರೆ ಇತ್ತೀಚಿನ ವಿಶ್ವಕಪ್ ಟೂರ್ನಿಯಲ್ಲಿ ನೇಮ 124 ಪಂದ್ಯಗಳಲ್ಲಿ 77 ಗೋಲುಗಳನ್ನು ಬಾರಿಸುವ ಮೂಲಕ ಸಾಧನೆ ಸಮಬಲ ಸಾಧಿಸಿದ್ದಾರೆ.
Advertisement
2021ರ ಸೆಪ್ಟೆಂಬರ್‌ನಲ್ಲಿ ಪೀಲೆ ಅವರಿಗೆ ಶಸ್ತ್ರಚಿಕಿತ್ಸೆ ಮಾಡಿ ದೊಡ್ಡ ಕರುಳಿನ ಕ್ಯಾನ್ಸರ್ ಗೆಡ್ಡೆಯನ್ನು ತೆಗೆಯಲಾಗಿತ್ತು. ಆದರೆ ಇತ್ತೀಚೆಗೆ ಅವರು ಕೋವಿಡ್‌ಗೆ ತುತ್ತಾಗಿದ್ದರಿಂದ ಮತ್ತೆ ಕ್ಯಾನ್ಸರ್ ಸಮಸ್ಯೆ ಕೂಡ ಮರುಕಳಿಸಿತ್ತು. ಮೂರು ಬಾರಿ ಮದುವೆಯಾಗಿರುವ ಪೀಲೆ ಅವರಿಗೆ 7 ಮಕ್ಕಳಿದ್ದಾರೆ. ಇದನ್ನೂ ಓದಿ: ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಸೇರಿ ಹಲವರಿಗೆ T20 ಯಿಂದ ಬ್ರೇಕ್?