ಬೆಂಗ್ಳೂರಿನ ಮೂರು ಕಾಲೇಜುಗಳಿಗೆ ಬಾಂಬ್ ಬೆದರಿಕೆ – ಪೊಲೀಸರಿಂದ ತೀವ್ರ ಶೋಧ

Public TV
1 Min Read
three top bengaluru colleges receive bomb threat mails 2

ಬೆಂಗಳೂರು: ನಗರದ (Bengaluru) ಮೂರು ಖಾಸಗಿ ಕಾಲೇಜುಗಳಿಗೆ (College) ಕಿಡಿಗೇಡಿಗಳು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ (Bomb Threat) ಹಾಕಿದ್ದಾರೆ.

ಮಧ್ಯಾಹ್ನ 1 ಗಂಟೆ ಸುಮಾರಿಗೆ ಕಾಲೇಜುಗಳಿಗೆ ಇ ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಬಿಎಮ್‍ಎಸ್, ರಾಮಯ್ಯ, ಬಿಐಟಿ ಕಾಲೇಜುಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಇದನ್ನೂ ಓದಿ: ‌ದರ್ಶನ್‌ಗೆ ಇವತ್ತೂ ಸಿಗಲಿಲ್ಲ ಬೇಲ್‌ – ಜಾಮೀನು ಅರ್ಜಿ ವಿಚಾರಣೆ ಶನಿವಾರಕ್ಕೆ ಮುಂದೂಡಿಕೆ

three top bengaluru colleges receive bomb threat mails 1

ಸದಾಶಿವನಗರ ಠಾಣಾ ವ್ಯಾಪ್ತಿಯಲ್ಲಿರೋ ಎಮ್.ಎಸ್ ರಾಮಯ್ಯ ಕಾಲೇಜು, ಹನುಮಂತ ನಗರ ಠಾಣಾ ವ್ಯಾಪ್ತಿಯಲ್ಲಿರೋ ಬಿಎಮ್‍ಎಸ್ ಹಾಗೂ ಬಸವನಗುಡಿಯ ಬಿಐಟಿ ಕಾಲೇಜುಗಳಿಗೆ ಬಾಂಬ್ ಬೆದರಿಕೆ ಬಂದಿದೆ.

ಕಾಲೇಜುಗಳಲ್ಲಿ ಸ್ಥಳೀಯ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಮತ್ತು ಶ್ವಾನ ದಳದಿಂದ ಪರಿಶೀಲನೆ ನಡೆಯುತ್ತಿದೆ. ಕಸದ ಡಬ್ಬಿ, ಲಿಫ್ಟ್, ಮೆಟ್ಟಿಲು, ಬ್ಯಾಗ್‍ಗಳನ್ನು ಪೊಲೀಸರು ತಪಾಸಣೆ ಮಾಡುತ್ತಿದ್ದಾರೆ.

ಕಳೆದ 28ರಂದು ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ಹೋಟೆಲ್‍ಗೆ ಐಪಿಎಸ್ ಅಧಿಕಾರಿ ಹೆಸರಲ್ಲಿ ಬಾಂಬ್ ಬೆದರಿಕೆ ಇ-ಮೇಲ್ ಬಂದಿತ್ತು. ಇದನ್ನೂ ಓದಿ: 5,600 ಕೋಟಿ ಮೌಲ್ಯದ ಕೊಕೇನ್ ಹಿಂದೆ ಕಾಂಗ್ರೆಸ್ ನಾಯಕನ ಕೈವಾಡ – ನಾಚಿಕೆಗೇಡು ಎಂದ ಅಮಿತ್ ಶಾ

Share This Article