ಕಾರವಾರ: ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಪ್ರವಾಸಿಗರ ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರ ಕಡಲತೀರದಲ್ಲಿ ನಡೆದಿದೆ.
ಅರ್ಜುನ್, ಉಮೇಶ್, ಸೂರ್ಯ ಅವರನ್ನು ರಕ್ಷಣೆ ಮಾಡಲಾಗಿದೆ. ಶಿವಮೊಗ್ಗದ ಶಿಕಾರಿಪುರದಿಂದ ಮುರುಡೇಶ್ವರ ಪ್ರವಾಸಕ್ಕೆ ಬಂದಿದ್ದ ಪ್ರವಾಸಿಗರು ಸಮುದ್ರದಲ್ಲಿ ಈಜುವಾಗ ಅಲೆಗಳ ರಭಸಕ್ಕೆ ಕೊಚ್ಚಿ ಹೋಗಿದ್ದರು. ಇದನ್ನೂ ಓದಿ: ಸ್ಯಾಂಡಲ್‍ವುಡ್‍ನವರಿಂದಲೇ ಕೋಟಿಗೊಬ್ಬನ ಓಟಕ್ಕೆ ತಡೆ – ಜಾಕ್ ಮಂಜು ಆರೋಪ
ಪ್ರವಾಸಿಗರು ಕೊಚ್ಚಿ ಹೋಗುತ್ತಿರುವುದನ್ನು ಗಮನಿಸಿದ ಲೈಫ್ ಗಾರ್ಡ್ ಸಿಬ್ಬಂದಿ ಹಾಗೂ ಟೂರಿಸ್ಟ್ ಮಿತ್ರ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.