Connect with us

Crime

ಕಾಲೇಜಿನಲ್ಲಿ ವೈದ್ಯಕೀಯ ಪರೀಕ್ಷೆ – ಮೂವರು ಗರ್ಭಿಣಿ, ವೈದ್ಯರಿಗೆ ಶಾಕ್

Published

on

ಹೈದರಾಬಾದ್: ವೈದ್ಯಕೀಯ ಪರೀಕ್ಷೆ ವೇಳೆ ತೆಲಂಗಾಣದ ಕಾಲೇಜಿನ ಮೂರು ಮಂದಿ ವಿದ್ಯಾರ್ಥಿನಿಯರು ಗರ್ಭಿಣಿಯಾಗಿರುವ ವಿಚಾರ ಬೆಳಕಿಗೆ ಬಂದಿದೆ.

ಕುಮಾರಂಭೀಮ್- ಅಸಿಫಾಬಾದ್ ಜಿಲ್ಲೆಯ ಸರ್ಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಇತ್ತೀಚೆಗೆ ವೈದ್ಯಕೀಯ ಪರೀಕ್ಷೆಯನ್ನು ಆಯೋಜಿಸಲಾಗಿತ್ತು. ವೈದ್ಯಕೀಯ ತಪಾಸಣೆ ಮಾಡಿದಾಗ ವಿದ್ಯಾರ್ಥಿನಿಯರು ಗರ್ಭಿಣಿಯಾಗಿರುವ ವಿಷಯ ಬೆಳಕಿಗೆ ಬಂದಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ (ಡಿಸಿಪಿಒ), ಮೂವರು ವಿದ್ಯಾರ್ಥಿನಿಯರು ಕೆಲವು ದಿನಗಳ ಹಿಂದೆ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ. ಹಾಗಾಗಿ ಮೂವರು ಗರ್ಭಿಣಿಯಾಗಿದ್ದಾರೆ ಎಂದು ತಿಳಿಸಿದ್ದಾರೆ. ಈ ಪ್ರಕರಣದ ಆರೋಪಿ ಯಾರು ಎಂಬುದು ಇದುವರೆಗೂ ತಿಳಿದು ಬಂದಿಲ್ಲ. ಮೂವರು ವಿದ್ಯಾರ್ಥಿನಿಯರಲ್ಲಿ ಇಬ್ಬರು ಮೊದಲನೇ ವರ್ಷ ಬಿಎಸ್‍ಸಿ ಓದುತ್ತಿದ್ದಾರೆ, ಮತ್ತೊಬ್ಬ ವಿದ್ಯಾರ್ಥಿನಿ ಎರಡನೇ ವರ್ಷ ಬಿಎಸ್‍ಸಿ ವ್ಯಾಸಂಗ ಮಾಡುತ್ತಿದ್ದಾರೆ.

ನವೆಂಬರ್ 21ರಂದು ವೈದ್ಯಕೀಯ ತಪಾಸಣೆ ನಡೆದಿತ್ತು. ಆದರೆ ಶನಿವಾರ ಈ ವಿಚಾರ ಬೆಳಕಿಗೆ ಬಂದಿದೆ. ಪ್ರಕರಣದ ಬಗ್ಗೆ ಸ್ಥಳೀಯ ಮಕ್ಕಳ ಹಕ್ಕುಗಳ ಕಾರ್ಯಕರ್ತ ಅಧಿಕಾರಿಗಳಿಗೆ ತಿಳಿಸಿದಾಗ ವಿಚಾರಣೆ ನಡೆಸಲಾಯಿತು. ವಿಚಾರಣೆ ವೇಳೆ ವಿದ್ಯಾರ್ಥಿನಿಯರ ಮನೆಗಳ ಬಳಿ ವಾಸಿಸುವ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂಬುದು ತಿಳಿದು ಬಂದಿದೆ. ಈ ಬಗ್ಗೆ ಕಾಲೇಜು ಆಡಳಿತ ಮಂಡಳಿ ಇದುವರೆಗೂ ಯಾವುದೇ ದೂರನ್ನು ದಾಖಲಿಸಿಲ್ಲ.

Click to comment

Leave a Reply

Your email address will not be published. Required fields are marked *