– ನೀರಿನಲ್ಲಿ ಮುಳುಗುತ್ತಿದ್ದ ಸ್ನೇಹಿತನನ್ನು ಕಾಪಾಡಲು ಹೋಗಿ ಇಬ್ಬರೂ ದುರಂತ ಸಾವು
ಬೀದರ್: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಈಜಲು ಹೋಗಿದ್ದ ಮೂವರು ಯುವಕರು ನೀರುಪಾಲಾಗಿರುವ ದುರಂತ ಘಟನೆ ಬೀದರ್‌ನಲ್ಲಿ (Bidar) ಸಂಭವಿಸಿದೆ.
ಪ್ರಕಾಶ್(22), ಶಿವಾಜೀ (21) ಮತ್ತು ಆಕಾಶ್ ಕಂಟೆಪ್ಪ ಗುಂಗೆ (23) ಮೃತ ದುರ್ದೈವಿಗಳು. ಇದನ್ನೂ ಓದಿ: ಮಂಗಳೂರು| ರಾಜ್ಯದ ಇತಿಹಾಸದಲ್ಲೇ ಅತಿ ದೊಡ್ಡ ಡ್ರಗ್ಸ್ ಬೇಟೆ – 75 ಕೋಟಿ ಮೌಲ್ಯದ ಮಾದಕ ವಸ್ತು ವಶಕ್ಕೆ
ಪ್ರಕಾಶ್ ಹಾಗೂ ಶಿವಾಜೀ ಎಂಬ ಯುವಕರಿಬ್ಬರು ಜಿಲ್ಲೆಯ ಚಿಟಗುಪ್ಪ ತಾಲೂಕಿನ ವಿಠಲಪುರ ಗ್ರಾಮದ ಐತಿಹಾಸಿಕ ಬಾವಿಯಲ್ಲಿ ಈಜಲು ತೆರಳಿದ್ದರು. ಆಳದ ಬಾವಿಯಲ್ಲಿ ಸಿಲುಕಿಕೊಂಡಿದ್ದ ಸ್ನೇಹಿತನನ್ನು ಕಾಪಾಡಲು ಹೋಗಿ ಇಬ್ಬರೂ ನೀರುಪಾಲಾಗಿದ್ದಾರೆ. ಇದನ್ನೂ ಓದಿ: ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಆಸ್ಪತ್ರೆಗೆ ದಾಖಲು
ಸ್ಥಳಕ್ಕಾಗಮಿಸಿದ ಗ್ರಾಮಸ್ಥರು ಹಾಗೂ ಪೊಲೀಸರು, ಇಬ್ಬರು ಯುವಕರ ಮೃತದೇಹಗಳನ್ನು ಹೊರ ತೆಗೆದರು. ಬೆಮ್ಮಳಕೇಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಿಲ್ಲೆಯ ಹುಲಸೂರು ತಾಲೂಕಿನ ಗಡಿಗೌಡಗಾಂವ್ ಗ್ರಾಮದ ಕೆರೆಯಲ್ಲಿ ಆಕಾಶ್ ಕಂಟೆಪ್ಪ ಗುಂಗೆ ಎಂಬ ಯುವಕ ನೀರುಪಾಲಾಗಿದ್ದಾನೆ. ಸ್ನೇಹಿತರ ಜೊತೆ ಈಜಲು ಹೋಗಿದ್ದಾಗ ಈಜು ಬಾರದೇ ಆಕಾಶ್ ಮೃತಪಟ್ಟಿದ್ದಾನೆ. ಇದನ್ನೂ ಓದಿ: ಬಿಡದಿಯ ಪ್ರತಿಷ್ಠಿತ ಕಾರ್ಖಾನೆಯ ಶೌಚಾಲಯದಲ್ಲಿ ಪಾಕಿಸ್ತಾನ ಪರ ಬರಹ ಪತ್ತೆ
ಕೆರೆಯಲ್ಲಿ ಶೋಧ ನಡೆಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಯುವಕನ ಮೃತದೇಹವನ್ನು ಹೊರ ತೆಗೆದರು. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಹುಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.