ಮುಂಬೈ: ದಂಗಲ್ ಚಿತ್ರದ ಯಶಸ್ಸಿನ ನಂತರ ಅಮೀರ್ ಖಾನ್ ತಮ್ಮ ಮುಂದಿನ ಥಗ್ಸ್ ಆಫ್ ಹಿಂದೊಸ್ತಾನ್ ಚಿತ್ರದಲ್ಲಿ ಬ್ಯುಸಿಯಾಗಿದ್ದು, ಚಿತ್ರದ ಸೆಟ್ ಗೆ ಭಾರೀ ಭದ್ರತೆಯನ್ನು ಪಡೆದುಕೊಂಡಿದ್ದಾರೆ.
ಥಗ್ಸ್ ಆಫ್ ಹಿಂದೊಸ್ತಾನ್ ಚಿತ್ರದ ಲುಕ್ ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆಯಾಗಿದ್ದು, ಅಮೀರ್‍ಗೆ ಬೇಸರ ತಂದಿದೆ. ತಮ್ಮ ಡ್ರೀಮ್ ಪ್ರಾಜೆಕ್ಟ್ ಗೆ ಮತ್ತಷ್ಟು ಹಾನಿ ಮಾಡಿಕೊಳ್ಳಲು ಇಚ್ಛಿಸದ ಅಮೀರ್ ಸಿನಿಮಾ ಸೆಟ್ ಗೆ ಹೆಚ್ಚಿನ ಭದ್ರತೆ ತೆಗೆದುಕೊಳ್ಳುವ ನಿರ್ಧಾರ ಮಾಡಿದ್ದಾರೆ.
ಈ ಸಿನಿಮಾದಲ್ಲಿ ಜನರಿಗೆ ಕುತೂಹಲ ಮೂಡಿಸಲು ಅಮೀರ್ ಖಾನ್ ಅಸಾಧ್ಯವಾದುದ್ದನ್ನು ಸಾಧ್ಯವನ್ನಾಗಿ ಮಾಡುತ್ತಾರೆ ಎಂದು ಹೇಳಲಾಗುತ್ತಿದೆ.
ಥಗ್ಸ್ ಆಫ್ ಹಿಂದೊಸ್ತಾನ್ ಚಿತ್ರದಲ್ಲಿ ಅಮಿತಾಬ್ ಬಚ್ಚನ್, ಕತ್ರಿನಾ ಕೈಫ್, ಫಾತಿಮಾ ಸನಾ ಶೇಕ್, ಜಾಕಿ ಶ್ರಾಫ್ ಸೇರಿದಂತೆ ದೊಡ್ಡ ತಾರಾಬಳಗವನ್ನು ಹೊಂದಿದೆ. ಸಿನಿಮಾ ಯಶ್ ರಾಜ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿದ್ದು, ವಿಜಯ್ ಕೃಷ್ಣನ್ ಆಚಾರ್ಯ ಅವರ ನಿರ್ದೇಶನವಿದೆ.