ನನಗೆ ಅಕ್ಷರಶಃ ಫೇಕ್ ಅನಿಸಿದ್ದು ತುಕಾಲಿ ಸಂತೋಷ್ ಅವರು ಎಂದಿದ್ದಾರೆ ಈ ವಾರ ಮಿಡ್ ವೀಕ್ ಎಲಿಮಿನೇಟ್ ಆಗಿರುವ ನಟಿ ನಮ್ರತಾ (Namratha Gowda). ಬಿಗ್ ಬಾಸ್ (Bigg Boss Kannada) ಜರ್ನಿ ಕುರಿತಂತೆ ಮಾತನಾಡಿರುವ ಅವರು ಹಲವಾರು ವಿಷಯಗಳನ್ನು ಹಂಚಿಕೊಂಡಿದ್ದಾರೆ. ನನಗೆ ಅಕ್ಷರಶಃ ಫೇಕ್ ಅನಿಸಿದ್ದು ತುಕಾಲಿ ಸಂತೋಷ್. ಅವರನ್ನು ಬಿಟ್ಟರೆ ಮತ್ತೆ ವಾಪಸ್ ಮನೆಯೊಳಗೆ ಬಂದಾಗ ಅನಿಸಿದ್ದು ಸ್ನೇಹಿತ್ ಕೂಡ ಫೇಕ್ ಎಂದು. ನಾನು ಅವರ ಕಡೆಯಿಂದ ಸಾಕಷ್ಟು ಬೆಂಬಲ ನಿರೀಕ್ಷಿಸಿದ್ದೆ. ಆದರೆ ಅವರು ಬಂದು ನನ್ನ ತುಂಬ ಡಿಮೋಟಿವೇಟ್ ಮಾಡಿದ್ದು ಸ್ನೇಹಿತ್. ಇಡೀ ಮನೆಯಲ್ಲಿ ನಾನು ತುಂಬ ಜೆನ್ಯೂನ್ ಆಗಿದ್ದೆ. ಹಾರ್ಟ್‌ಫುಲಿ ಜೆನ್ಯೂನ್ ಆಗಿದ್ದೆ.
ಒಬ್ಬರನ್ನು ಬೈದರೂ ಉಗಿದರೂ, ಪ್ರೀತಿಸದರೂ ಹೃದಯದಿಂದ ಮಾಡ್ತಿದ್ದೆ. ನನ್ನ ಬಿಟ್ರೆ ವಿನಯ್. ಅವರಲ್ಲಿ ನನಗೆ ಯಾವತ್ತೂ ಕಲ್ಮಶ ಕಾಣಿಸಲಿಲ್ಲ. ಸಂಗೀತ ಕೂಡ. ಅವರನ್ನು ನಾನು ತುಂಬ ತಪ್ಪು ತಿಳ್ಕೊಂಡಿದ್ದೆ. ಅವರು ಏನನಿಸುತ್ತದೋ ಅದನ್ನೇ ಮಾತಾಡ್ತಾರೆ. ಹೇಗನಿಸ್ತಾರೋ ಹಾಗೇ ಇರ್ತಾರೆ. ಅವರೂ ಜೆನ್ಯೂನ್ ಅನಿಸುತ್ತಾರೆ ನನಗೆ. ಟಾಪ್ 3ನಲ್ಲಿ ವಿನಯ್, ಸಂಗೀತಾ ಮತ್ತು ತುಕಾಲಿ ಇರ್ತಾರೆ. ನನಗೆ ವಿನಯ್ ವಿನ್ ಆಗ್ಬೇಕು ಅಂತ ಇದೆ. ಆದರೆ ಯಾಕೋ ನನ್ನ ಸಿಕ್ಸ್ತ್ ಸೆನ್ಸ್ ಹೇಳ್ತಿದೆ ಸಂಗೀತಾ ವಿನ್ ಆಗ್ತಾರೆ ಅಂತ. ನನ್ನ ಪ್ರಕಾರ ಈ ಸೀಟಲ್ಲಿ ನನ್ನ ನಂತರ ಕಾರ್ತಿಕ್ ಮಹೇಶ್ ಕೂತಿರ್ತಾರೆ.
ಜಿಯೊ ಸಿನಿಮಾ ಫನ್ ಫ್ರೈಡೆ
ಜಿಯೊ ಸಿನಿಮಾ ಫನ್ ಫ್ರೈಡೆಯ ಎಲ್ಲ ಟಾಸ್ಕ್‌ಗಳನ್ನೂ ನಾನು ಎಂಜಾಯ್ ಮಾಡಿದ್ದೇನೆ. ಅದರಲ್ಲಿ ತಲೆಗೆ ಹೆಲ್ಮೆಟ್ ಹಾಕಿಕೊಂಡು ಬಲೂನ್ ಒಡೆಯುವ ಟಾಸ್ಕ್ ಅನ್ನು ನಾನು ಸಖತ್ ಎಂಜಾಯ್ ಮಾಡಿದೆ. ಸಂತು-ಪಂತು ಆಟ ನೋಡಿ ಸಿಕ್ಕಾಪಟ್ಟೆ ನಕ್ಕಿದ್ದೇನೆ. ಮೊನ್ನೆ ಇನ್ನೊಂದು ಫುಟ್‌ಬಾಲ್ ಇರುತ್ತದೆ. ಅದನ್ನು ಸ್ಮೈಲಿ ಬಾಲ್‌ನಲ್ಲಿ ಹೊಡೆದು ತಳ್ಳಬೇಕು. ಅಲ್ಲಿಯೂ ನಾನು ಸಖತ್ ಎಂಜಾಯ್ ಮಾಡಿದ್ದು ಸಂತು-ಪಂತು ಆಟ ನೋಡಿ.
ಮೈಕ್ ಮಸಲ್ ಮೆಮರಿ ಆಗ್ಬಿಟ್ಟಿದೆ
ಬಿಗ್‌ಬಾಸ್ ಮನೆಯಲ್ಲಿ ನಾನು ತುಂಬ ಮಿಸ್ ಮಾಡ್ಕೊಳ್ಳೋದು ಮೈಕ್. ಅದು ನನ್ನ ಮಸಲ್ ಮೆಮರಿ ಆಗ್ಬಿಟ್ಟಿದೆ. ಈಗಲೂ ನಾನು ಮೈಕ್ ಅಂತ ನೋಡ್ಕೋತಿರ್ತಿನಿ. ಬಿಗ್‌ಬಾಸ್ ಧ್ವನೀನ ಮಿಸ್ ಮಾಡ್ಕೋತೀನಿ. ಅವರ ಜೊತೆಗೆ ಫ್ಲರ್ಟ್ ಮಾಡಿದ್ದನ್ನು ಮಿಸ್ ಮಾಡ್ಕೋತೀನಿ. ಬೆಳಿಗ್ಗೆ ಸಾಂಗ್ಸ್ ಮಿಸ್ ಮಾಡ್ಕೋತೀನಿ. ಆ ಮನೆಯ ಒಂದೊಂದು ಮೂಲೆಯಲ್ಲಿ ಒಂದೊಂದು ಮೆಮರಿ ಇದೆ. ಅದನ್ನು ಕೇಳಿದ್ರೆ ಹೇಳೋಕೆ ಕಷ್ಟವಾಗತ್ತೆ.
ಕೊನೆದಾಗಿ ನಾನು ಬಿಗ್‌ಬಾಸ್‌ಗೆ ಹೇಳಬೇಕು, ‘ಬಿಗ್‌ಬಾಸ್, ನಾನು ನಿಮ್ ಧ್ವನಿಗೆ ಬಿದ್ದೋಗಿದೀನಿ. ಫಿದಾ ಆಗಿದೀನಿ. ನೀವು ಹೇಗಿದೀರಾ ನೋಡ್ಬೇಕು. ಹ್ಯಾಪಿಯೆಸ್ಟ್ ವರ್ಷನ್ ಆಫ್ ನಮ್ರತಾ ಇದು. ನನ್ನನ್ನು ನಾನು ಪ್ರೀತಿಸಲು ಶುರುಮಾಡಿದೀನಿ. ನೀವು ಕೊಟ್ಟ ಎಲ್ಲ ಸಿಚುವೇಷನ್ಗಳು ಪಾಠಗಳು ನನ್ನನ್ನು ಗಟ್ಟಿಗೊಳಿಸಿವೆ. ಇಲ್ಲಿ ಇಷ್ಟೊಂದು ಫೇಸ್ ಮಾಡಿದವಳು ಹೊರಗಡೆ ಏನು ಬೇಕಾದ್ರೂ ಫೇಸ್ ಮಾಡೋಕೆ ರೆಡಿ ಇದೀನಿ. ಥ್ಯಾಂಕ್ಯೂ ಸೋ ಮಚ್ ಬಿಗ್‌ಬಾಸ್!’