ಬೆಂಗಳೂರು: ಮುಂದಿನ 3 ಗಂಟೆಗಳಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ (Rain) ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಬಳ್ಳಾರಿ, ದಾವಣಗೆರೆ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಯೊಳಗಾಗಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಇಂದು ಹವಾಮಾನ ವರದಿ ತಿಳಿಸಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಅಲ್ಪ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಭಾಗಕ್ಕೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದು, ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಇದನ್ನೂ ಓದಿ: ಒಂದೇ ಕುಟುಂಬದ 8 ಜನರಿದ್ದ ಕಾರಿಗೆ ಬೆಂಕಿ – ಹುಡುಗಿ ಸಜೀವ ದಹನ
ಬೆಂಗಳೂರು ನಗರ, ಗ್ರಾಮಾಂತರ, ತುಮಕೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಕೋಲಾರ, ರಾಮನಗರ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಿದ್ದು, ಗುಡುಗು-ಮಿಂಚು ಸಹಿತ ಮಳೆ ಎಚ್ಚರಿಕೆಯನ್ನು ನೀಡಿದೆ. ಇದನ್ನೂ ಓದಿ: ಮುಸ್ಲಿಮರಿಗೆ ರಾಷ್ಟ್ರದ ಸಂಪತ್ತಿನ ಮೊದಲ ಹಕ್ಕು ಎಂದು ಕಾಂಗ್ರೆಸ್ ಹೇಳಿತ್ತು: ಮೋದಿ ಕಿಡಿ