– ಹೋರಾಟಕ್ಕೆ 23 ಸಂಘಟನೆಗಳ ಬೆಂಬಲ
ರಾಯಚೂರು: ತುಂಗಭದ್ರಾ ಹಂಗಾಮಿ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ರಾಯಚೂರು ಬಂದ್‍ಗೆ ಕರೆ ನೀಡಿದ್ದಾರೆ. ಹೋರಾಟ 43ನೇ ದಿನಕ್ಕೆ ಕಾಲಿಟ್ಟಿದ್ದು, ಸರ್ಕಾರ ಹೋರಾಟಕ್ಕೆ ಯಾವುದೇ ಸ್ಪಂದನೆ ನೀಡದ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲಾ ಬಂದ್‍ಗೆ ಕರೆ ನೀಡಿದ್ದಾರೆ.
Advertisement
ಹೋರಾಟಕ್ಕೆ ಈಗಾಗಲೇ 23 ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದು, ಬೈಕ್ ಮೆರವಣಿಗೆ ಮೂಲಕ ಕಾರ್ಮಿಕರು ಬಂದ್ ಆಚರಣೆಗೆ ಮುಂದಾಗಿದ್ದಾರೆ. ಸಮಾನ ಕೆಲಸಕ್ಕೆ ಸಮಾನ ವೇತನ, ಗುತ್ತಿಗೆ ಕಾರ್ಮಿಕ ಪದ್ಧತಿ ರದ್ದುಗೊಳಿಸುವುದು ಹಾಗೂ ವೇತನ ಹೆಚ್ಚಳದ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬಂದ್‍ಗೆ ಕರೆ ನೀಡಲಾಗಿದೆ.
Advertisement
Advertisement
ತುರ್ತು ಸೇವೆಗಳನ್ನ ಹೊರತುಪಡಿಸಿ ಉಳಿದೆಲ್ಲಾ ಸೇವೆಗಳ ಸಂಪೂರ್ಣ ಬಂದ್‍ಗೆ ಹೋರಾಟಗಾರರು ಮುಂದಾಗಿದ್ದಾರೆ. ಬೆಳಗಿನ ಜಾವದಿಂದ ಬಂದ್‍ಗೆ ಮಿಶ್ರಪ್ರತಿಕ್ರಿಯೇ ವ್ಯಕ್ತವಾಗುತ್ತಿದೆ. ಇಡೀ ದೇಶಾದ್ಯಂತ ಬಿಡುಗಡೆಯಾಗಿರುವ ಬಾಹುಬಲಿ-2 ಸಿನೆಮಾ ರಾಯಚೂರಿನ ಮೂರು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದ್ದು, ಚಿತ್ರ ಪ್ರದರ್ಶನಕ್ಕೆ ಬಂದ್ ಅಡ್ಡಿಯಾಗುವ ಸಾಧ್ಯತೆಯಿದೆ.