ಕನ್ನಡದ ಹಿರಿಯ ನಟ ದ್ವಾರಕೀಶ್ (Dwarakish) ಅಂತ್ಯಕ್ರಿಯೆ ಇಂದು (ಏ.17) ಬೆಂಗಳೂರಿನ ಟಿ.ಆರ್ ಮೀಲ್‌ನಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ನಡೆಯಿತು. ಬ್ರಾಹ್ಮಣರ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ದ್ವಾರಕೀಶ್ ಹಿರಿಯ ಪುತ್ರ ಸಂತೋಷ್ ಅವರು ಚಿತೆಗೆ ಅಗ್ನಿಸ್ಪರ್ಷ ಮಾಡಿದರು. ಅಲ್ಲಿಗೆ ದ್ವಾರಕೀಶ್ ಪಂಚಭೂತಗಳಲ್ಲಿ ಲೀನವಾದರು. ಇದೀಗ ನಾಳೆ ಶ್ರೀರಂಗಪಟ್ಟಣದಲ್ಲಿ ದ್ವಾರಕೀಶ್ ಅಸ್ಥಿ ವಿಸರ್ಜನೆ ಕಾರ್ಯ ನಡೆಯಲಿದೆ. ಇದನ್ನೂ ಓದಿ:ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ನಟ ಮೋಹನ್‌ಲಾಲ್
ಬೆಳಗ್ಗೆ 7 ಗಂಟೆಗೆ ರುದ್ರಭೂಮಿಯಲ್ಲಿ ಪೂಜೆ ನೆರವೆರಿಸಿ ದ್ವಾರಕೀಶ್ ಅಸ್ಥಿ ತೆಗೆದುಕೊಂಡು ಹೋಗಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಬಳಿಕ 9 ಗಂಟೆಯ ನಂತರ ಶ್ರೀರಂಗಪಟ್ಟಣದಲ್ಲಿ ದ್ವಾರಕೀಶ್ ಅಸ್ಥಿ ವಿಸರ್ಜನೆ ಕಾರ್ಯ ಹಿರಿಯ ಮಗ ಸಂತೋಷ್‌ರಿಂದ ನಡೆಯಲಿದೆ.
- Advertisement
- Advertisement
ನಿನ್ನೆ (ಏ.16) ಬೆಳಗ್ಗೆ ದ್ವಾರಕೀಶ್ ಅವರು ತಮ್ಮ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದರು. ನಿನ್ನೆಯಿಂದ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಕನ್ನಡ ಚಿತ್ರೋದ್ಯಮದ ಗಣ್ಯರು ಸಂತಾಪ ವ್ಯಕ್ತ ಪಡಿಸಿದ್ದರು. ಅಲ್ಲದೇ, ಪ್ರಧಾನಿ ನರೇಂದ್ರ ಮೋದಿ, ಸೂಪರ್ ಸ್ಟಾರ್ ರಜನಿಕಾಂತ್, ಸುದೀಪ್, ಯಶ್ ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು ದ್ವಾರಕೀಶ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.