ಇತ್ತೀಚಿನ ದಿನಗಳಲ್ಲಿ ಯುವ ಜನರು ಥೈರಾಯ್ಡ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಆಧುನಿಕ ಜೀವನಶೈಲಿ ಮತ್ತು ಕೆಲಸದ ಒತ್ತಡದಿಂದಾಗಿ ಅನೇಕರು ಥೈರಾಯ್ಡ್ (Thyroid) ಸಮಸ್ಯೆಗೆ ಒಳಗಾಗುತ್ತಿದ್ದಾರೆ. ಆದರೆ ಆಹಾರ ಶೈಲಿಯಲ್ಲಿ ಸ್ವಲ್ಪ ಬದಲಾವಣೆ ಮಾಡಿಕೊಂಡರೆ ಥೈರಾಯ್ಡ್ ಕಡಿಮೆ ಮಾಡಿಕೊಳ್ಳಬಹುದು. ರಾತ್ರಿ ಮಲಗುವ ವೇಳೆ ಈ ಆಹಾರಗಳನ್ನು ಸೇವಿಸುವುದರಿಂದ ಒಳ್ಳೆಯ ನಿದ್ದೆಯೂ ಬರುತ್ತದೆ ಜೊತೆಗೆ ಥೈರಾಯ್ಡ್ ಸಮಸ್ಯೆಯು ಸ್ವಲ್ಪ ಮಟ್ಟಿಗೆ ದೂರವಾಗುತ್ತದೆ.
4-5 ಗೋಡಂಬಿ ಸೇವಿಸಿ: ಗೋಡಂಬಿಯು (Cashews) ಖನಿಜ ಸೆಲೆನಿಯಮ್ ಹೊಂದಿರುತ್ತದೆ. ಇದು ಥೈರಾಯ್ಡ್ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಜೊತೆಗೆ ಆಕ್ಸಿಡೇಟಿವ್ ಒತ್ತಡದಿಂದ ಥೈರಾಯ್ಡ್ ಅಂಗಾಂಶವನ್ನು ರಕ್ಷಿಸುತ್ತದೆ. ಇದರಿಂದಾಗಿ ಪ್ರತಿನಿತ್ಯ ನೆನೆಸಿದ 4-5 ಗೋಡಂಬಿಗಳನ್ನು ಸೇವಿಸಿ.
- Advertisement
ತೆಂಗಿನ ಕಾಯಿ: ಇದರಲ್ಲಿ ಹೆಚ್ಚಿನ ಮಟ್ಟದ ಕೊಬ್ಬಿನಾಮ್ಲಗಳನ್ನು ಹೊಂದಿದೆ. ತೆಂಗಿನ ಕಾಯಿಯು ಚಯಾಪಚಯ ಮತ್ತು ಶಕ್ತಿಯ ಮಟ್ಟವನ್ನು ಹೆಚ್ಚಿಸುತ್ತದೆ. ಜೊತೆಗೆ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದು ಸುಧಾರಿತ ಥೈರಾಯ್ಡ್ ಆರೋಗ್ಯಕ್ಕೆ ಕೊಡುಗೆ ನೀಡುತ್ತದೆ. ಇದರಿಂದಾಗಿ ಮಲಗುವ ಮುನ್ನ 4 – 5 ತೆಂಗಿನ ಚೂರುಗಳನ್ನು ತಿನ್ನುವುದರಿಂದ ಥೈರಾಯ್ಡ್ ನಿಯಂತ್ರಣಕ್ಕೆ ಬರುತ್ತದೆ.
- Advertisement
ಚೀಯಾ ಬೀಜಗಳು: 1 ಚಮಚದಷ್ಟು ನೆನಸಿದ ಚೀಯಾ ಬೀಜಗಳನ್ನು ಸೇವಿಸುವುದರಿಂದ ಥೈರಾಯ್ಡ್ ನಿಯಂತ್ರಣದಲ್ಲಿರುತ್ತದೆ. ಇದರಲ್ಲಿ ಒಮೆಗಾ – 3 ಕೊಬ್ಬಿನಾಮ್ಲಗಳು ಉರಿಯೂತದ ಗುಣಲಕ್ಷಣಗಳನ್ನು ಹೊಂದಿದೆ. ಇದರಿಂದಾಗಿ ಥೈರಾಯ್ಡ್ ಗ್ರಂಥಿಯಲ್ಲಿ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದನ್ನೂ ಓದಿ: ಖಿನ್ನತೆಯಿಂದ ಬಳಲುತ್ತಿದ್ದೀರಾ ಹಾಗಾದ್ರೆ ಈ ಆಹಾರ ಸೇವಿಸಿ
ಕುಂಬಳಕಾಯಿ ಬೀಜಗಳು: ಹುರಿದ ಕುಂಬಳ ಕಾಯಿ ಬೀಜಗಳು ಝಿಂಕ್‍ನ ಸಮೃದ್ಧ ಮೂಲವಾಗಿದೆ. ಇದು ಥೈರಾಯ್ಡ್ ನಿಯಂತ್ರಣದಲ್ಲಿಡಲು ಸಹಕಾರಿಯಾಗಿದೆ. ಕುಂಬಳಕಾಯಿ ಬೀಜಗಳು ಟ್ರಿಪ್ಟೋಫಾನ್‍ನ ನೈಸರ್ಗಿಕ ಮೂಲವಾಗಿದೆ. ಇದರಲ್ಲಿ ನಿದ್ರೆಯನ್ನು ಉತ್ತೇಜಿಸುವ ಅಮೈನೋ ಆಮ್ಲವಿದೆ. ಸರಿಯಾಗಿ ನಿದ್ದೆ ಮಾಡುವುದರಿಂದ ಥೈರಾಯ್ಡ್ ಮೇಲೆ ಉತ್ತಮ ಪರಿಣಾಮ ಬೀರುತ್ತದೆ. ಇದನ್ನೂ ಓದಿ: ಬೇಸಿಗೆಯಲ್ಲಿ ಕಬ್ಬಿನ ಹಾಲನ್ನು ಕುಡಿಯೋದ್ರಿಂದ ಅದ್ಭುತ ಪ್ರಯೋಜನ