ಚಿಕ್ಕಮಗಳೂರು: ಸರ್ಕಾರದ ಹಣವನ್ನು ಪ್ರಿಯತಮೆ ಖಾತೆಗೆ ಹಾಕಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲ್ಲೂಕಿನಲ್ಲಿ ನಡೆದಿದೆ.
ಸರ್ಕಾರಕ್ಕೆ ಮೋಸ ಮಾಡಿರುವುದು ಸಾಬೀತಾಗಿದ್ದು, 9 ಸಾವಿರ ರೂ. ಸರ್ಕಾರದ ಹಣವನ್ನು ಪ್ರಿಯತಮೆಯ ಖಾತೆಗೆ ವರ್ಗಾವಣೆಯಾಗಿದೆ. ಈ ಹಿನ್ನೆಲೆಯಲ್ಲಿ ಕಳಸ ಅರಣ್ಯ ಇಲಾಖೆಯ ಡಿ.ಆರ್.ಎಫ್.ಓ. ಚಂದನ್ ಗೌಡ ಅವರನ್ನು ಅಮಾನತುಗೊಳಿಸಿ ಕೊಪ್ಪ ಡಿ.ಎಫ್.ಓ. ಉಪೇಂದ್ರ ಪ್ರತಾಪ್ ಸಿಂಗ್ ಆದೇಶಿಸಿದ್ದಾರೆ. ಇದನ್ನೂ ಓದಿ: ದೇವಸ್ಥಾನ ಪ್ರವೇಶ ವೇಳೆ ಹಿಂದೂ ಎಂಬುದಕ್ಕೆ ಸಾಕ್ಷಿ ತೋರಿಸಿ ಎಂದರು-‘ನೀಲಕಂಠ’ ನಟಿ ನಮಿತಾ
ಆನ್‌ಲೈನ್ ಟಿಕೆಟ್ ಫೋರ್ಜರಿ ಮಾಡುವ ಮೂಲಕ ಈ ಹಣವನ್ನು ವಂಚನೆ ಮಾಡಲಾಗಿದೆ. ರಾಣಿಝರಿ ಜಲಪಾತ, ಬಂಡಾಜೆ ಫಾಲ್ಸ್ ಬಳಿ ಟಿಕೆಟ್ ಗೋಲ್ಮಾಲ್ ಮಾಡಿರುವುದು ಬೆಳಕಿಗೆ ಬಂದಿದೆ.
ಬೆಳಕಿಗೆ ಬಂದಿದ್ದು ಹೇಗೆ?
ಬಂಡಾಜೆ ಫಾಲ್ಸ್ ಬಳಿ 200ಕ್ಕೂ ಅಧಿಕ ಜನರು ಬಂಡಾಜೆ ಫಾಲ್ಸ್ ನೋಡಲು ತೆರಳಿದ್ದರು.ಮಧ್ಯೆ ಚೆಕ್ ಮಾಡಲು ಹೋಗಿದ್ದ ಪೊಲೀಸರಿಗೆ ಪ್ರವಾಸಿಗರು ಸಿಕ್ಕಿ ಬಿದ್ದಿದ್ದಾರೆ. ವಿಚಾರಣೆ ಮಾಡಿದಾಗ ಜೂನ್ ತಿಂಗಳ ಆನ್‌ಲೈನ್ ಟಿಕೆಟ್ ಬುಕ್ಕಿಂಗ್, ಪ್ರವಾಸಿಗರ ನೋಂದಣಿ ಪುಸ್ತಕಕ್ಕೂ ತಾಳೆ ಆಗುತ್ತಿರಲಿಲ್ಲ. ಪೊಲೀಸರು ಪ್ರವಾಸಿಗರನ್ನು ವಿಚಾರಣೆ ನಡೆಸಿದಾಗ ಅಕ್ರಮ ಬೆಳಕಿಗೆ ಬಂದಿದೆ.ಇದನ್ನೂ ಓದಿ: ಉಗ್ರ ಸಂಘಟನೆ ಜೊತೆ ನಂಟು ಹೊಂದಿದ್ದ ಅಫ್ಸರ್ ಪಾಷಾ ಹಿಂಡಲಗಾ ಜೈಲಿಗೆ ಶಿಫ್ಟ್
ಈಗ ಇಲಾಖೆ ವಿಚಾರಣೆ ನಡೆಸುತ್ತಿದೆ. ಇಲಾಖೆಯ ಲಕ್ಷಗಟ್ಟಲೇ ಹಣ ಮೋನಿಕಾ ಎಂಬ ಯುವತಿಯ ಖಾತೆಗೆ ಜಮಾ ಆಗಿರುವ ಕುರಿತು ಅನುಮಾನ ವ್ಯಕ್ತವಾಗಿದೆ.