ಬೆಳಗಾವಿ: ಜಿಲ್ಲೆಯವರಿಗೆ ಬಿಜೆಪಿ ಟಿಕೆಟ್ ನೀಡದಿರುವುದ್ದಕ್ಕೆ ಆಕ್ರೋಶ ಭುಗಿಲೆದ್ದಿದ್ದು, ಈ ನಡುವೆ ಹಾಲಿ ಎಂಎಲ್‍ಸಿ ಅರುಣ್ ಶಹಾಪುರ್‌ಗೆ ಟಿಕೆಟ್ ನೀಡಿದ್ದಕ್ಕೆ ಅಸಮಾಧಾನ ಸ್ಫೋಟಗೊಂಡಿದೆ. ಬೆಳಗಾವಿಯಲ್ಲಿ ಸಭೆ ಸೇರಿದ ಎರಡು ಸಾವಿರಕ್ಕೂ ಹೆಚ್ಚು ಶಿಕ್ಷಕರು, ಬೆಳಗಾವಿ ಜಿಲ್ಲೆಯವರಿಗೆ ಟಿಕೆಟ್ ನೀಡುವಂತೆ ಆಗ್ರಹಿಸಿದ್ದಾರೆ.
ಬೆಳಗಾವಿ ಜಿಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲಾ ಆಡಳಿತ ಮಂಡಳಿ ಹಾಗೂ ನೌಕರರ ಒಕ್ಕೂಟದಿಂದ ನಡೆದ ಸಭೆಯಲ್ಲಿ ಬೆಳಗಾವಿ ಜಿಲ್ಲೆಯವರಿಗೇ ಟಿಕೆಟ್ ನೀಡುವಂತೆ ಆಗ್ರಹ ವ್ಯಕ್ತವಾಯಿತು. ಈಗಾಗಲೇ ಘೋಷಣೆ ಮಾಡಿದ ಟಿಕೆಟ್ ವಾಪಸ್ ಪಡೆದು ಬೆಳಗಾವಿ ಜಿಲ್ಲೆಯವರಿಗೆ ಟಿಕೆಟ್ ಕೊಟ್ಟರೆ ಸ್ವಾಗತ. ಇಲ್ಲವಾದ್ರೆ ಬೆಳಗಾವಿ ಜಿಲ್ಲೆಯ ಎಲ್ಲ ಶಿಕ್ಷಕರು ಸೇರಿ ಒಮ್ಮತದ ಅಭ್ಯರ್ಥಿ ಆಯ್ಕೆ ಮಾಡಿ ಪಕ್ಷೇತರ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಸೈಕಲ್ ವಿಚಾರಕ್ಕೆ ಕಾಲೇಜು ವಿದ್ಯಾರ್ಥಿ ಕಿಡ್ನಾಪ್
Advertisement
Advertisement
ಈಗಾಗಲೇ ಐವರು ಆಕಾಂಕ್ಷಿಗಳು ಪಕ್ಷೇತರರಾಗಿ ಸ್ಪರ್ಧಿಸಲು ಇಂಗಿತ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಾಜ್ಯ ಪ್ರೌಢಶಾಲೆ ಸಹಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ರಾಮು ಗುಗವಾಡ, ಬೆಳಗಾವಿ ಜಿಲ್ಲಾ ಪ್ರೌಢಶಾಲೆ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಎಸ್.ಎಸ್.ಮಠದ ಸೇರಿ ಐವರು ಆಕಾಂಕ್ಷಿಗಳಿದ್ದಾರೆ.
Advertisement
Advertisement
ಬಂಡಾಯ ಅಭ್ಯರ್ಥಿಯಾಗಿ ಕೋರೆ ಪುತ್ರಿ ಕಣಕ್ಕೆ!
ವಾಯುವ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಡಾ.ಪ್ರಭಾಕರ್ ಕೋರೆ ಪುತ್ರಿ ಕಣಕ್ಕಿಳಿಯುವ ಕುರಿತಾದ ಚರ್ಚೆಗಳು ಗರಿಗೆದರಿವೆ. ಕೆಎಲ್‍ಇ ಕಾರ್ಯಾಧ್ಯಕ್ಷರಾಗಿರುವ ಡಾ.ಪ್ರಭಾಕರ್ ಕೋರೆ, ರಾಜ್ಯಸಭಾ ಮಾಜಿ ಸದಸ್ಯರು ಹೌದು. ಕೆಎಲ್‍ಇ ದಂತ ವಿಜ್ಞಾನ ಮಹಾವಿದ್ಯಾಲಯದಲ್ಲಿ ಉಪನ್ಯಾಸಕಿಯಾಗಿರುವ ಪ್ರಭಾಕರ್ ಕೋರೆ ಪುತ್ರಿ ಡಾ.ಪ್ರೀತಿ ಕೋರೆ ಅವರು, ಪರಿಷತ್ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಚರ್ಚೆಗಳು ನಡೆದಿವೆ. ಪ್ರಸ್ತುತ ಐವರು ಆಕಾಂಕ್ಷಿಗಳ ಪಟ್ಟಿಯಲ್ಲಿ ಡಾ.ಪ್ರೀತಿ ಕೋರೆ ಹೆಸರಿಲ್ಲ. ಇದನ್ನೂ ಓದಿ: ‘ಜೇಮ್ಸ್’ ಜೊತೆ ‘ಬೈರಾಗಿ’ ಟೀಸರ್ – ಪುನೀತ್ ಹುಟ್ಟುಹಬ್ಬಕ್ಕೆ ಶಿವಣ್ಣನ ಝಲಕ್