ಬೆಂಗಳೂರು: ರಾಜ್ಯಸಬಾ ಚುನಾವಣೆಗೆ ಸ್ಪರ್ಧಿಸಲು ಸ್ಯಾಂಡಲ್‍ವುಡ್ ನಟ ಜಗ್ಗೇಶ್ ಅವರಿಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿದ್ದು, ರಾಯರ ಕೃಪೆ ಅವರ ಪವಾಡಕ್ಕೆ ಧನ್ಯ ಎಂದು ಹೇಳಿದ್ದಾರೆ.
Advertisement
ಈ ಸಂಬಂಧ ಟ್ವೀಟ್ ಮಾಡಿರುವ ನವರಸ ನಾಯಕ, ಆತ್ಮೀಯ ಕನ್ನಡದ ಬಂಧುಗಳೆ 42 ವರ್ಷ ತಪಸ್ಸಿನಂತೆ ಕಲಾರಂಗದಲ್ಲಿ ಸೇವೆ ಮಾಡಿ ಕಾಯವಾಚಮನ ಸತ್ಯಮಾರ್ಗದಲ್ಲಿ ಬದುಕಿದ್ದೇನೆ. ನನ್ನ ನೆಚ್ಚಿನ ಭಾಜಪ ರಾಜ್ಯದ ಮುಖ್ಯ ಮಂತ್ರಿಗಳು, ಮಂತ್ರಿಗಳು, ಶಾಸಕಮಿತ್ರರು ಹಾಗೂ ರಾಜ್ಯ ರಾಷ್ಟ್ರದ ಸಂಘದ ಹಿರಿಯರ ಆಶೀರ್ವಾದದಿಂದ ರಾಜ್ಯಸಭೆಗೆ ಆಯ್ಕೆ ಆಗಿರುವೆ ತಮಗೆ ಶಿರಬಾಗಿ ವಂದಿಸುವೆ. ರಾಯರ ಕೃಪೆ ಅವರ ಪವಾಡಕ್ಕೆ ಧನ್ಯ ಎಂದು ಬರೆದುಕೊಂಡಿದ್ದಾರೆ.
Advertisement
ಆತ್ಮೀಯ ಕನ್ನಡದ ಬಂಧುಗಳೆ
42ವರ್ಷ ತಪಸ್ಸಿನಂತೆ ಕಲಾರಂಗದಲ್ಲಿ ಸೇವೆಮಾಡಿ
ಕಾಯವಾಚಮನ ಸತ್ಯಮಾರ್ಗದಲ್ಲಿ
ಬದುಕಿದ್ದೇನೆ.
ನನ್ನ ನೆಚ್ಚಿನ ಭಾಜಪ ರಾಜ್ಯದ ಮುಖ್ಯ ಮಂತ್ತಿಗಳು,ಮಂತ್ರಿಗಳು,ಶಾಸಕಮಿತ್ರರು,ರಾಜ್ಯ ರಾಷ್ಟ್ರದ ಸಂಘದ ಹಿರಿಯರ ಆಶೀರ್ವಾದದಿಂದ ರಾಜ್ಯಸಭೆಗೆ ಆಯ್ಕೆ ಆಗಿರುವೆ ತಮಗೆ ಶಿರಬಾಗಿ ವಂದಿಸುವೆ..
ರಾಯರ ಕೃಪೆ ಅವರ ಪವಾಡಕ್ಕೆ ಧನ್ಯ pic.twitter.com/443Lj0qRah
— ನವರಸನಾಯಕ ಜಗ್ಗೇಶ್ (@Jaggesh2) May 29, 2022
Advertisement
ಜೂನ್ 10 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಇಬ್ಬರು ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಘೋಷಣೆ ಮಾಡಿದೆ. ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಅವರನ್ನು ಕರ್ನಾಟಕದಿಂದಲೇ ಮುಂದುವರಿಸಲು ನಿರ್ಧರಿಸಿದ್ದು, ಕೆ.ಸಿ ರಾಮಮೂರ್ತಿ ಅವರಿಂದ ತೆರವಾಗಿದ್ದ ಸ್ಥಾನಕ್ಕೆ ನಟ ಜಗ್ಗೇಶ್‍ಗೆ ಅವಕಾಶ ನೀಡಿದೆ. ಇದನ್ನೂ ಓದಿ: ರಾಜ್ಯಸಭಾ ಚುನಾವಣೆ: ಜಗ್ಗೇಶ್, ನಿರ್ಮಲಾ ಸೀತಾರಾಮನ್‍ಗೆ ಸಿಕ್ತು ಬಿಜೆಪಿ ಟಿಕೆಟ್
Advertisement
ಕರ್ನಾಟಕ ರಾಜ್ಯದಿಂದ ರಾಜ್ಯಸಭೆಗೆ ಶ್ರೀಮತಿ @nsitharaman ಮತ್ತು ಶ್ರೀ @Jaggesh2 ಅವರನ್ನು ಬಿಜೆಪಿ ಪಕ್ಷದ ಅಭ್ಯರ್ಥಿಗಳೆಂದು ಘೋಷಿಸಲಾಗಿದೆ.
ಅಭಿನಂದನೆಗಳು. pic.twitter.com/1FfSBqBuLc
— BJP Karnataka (@BJP4Karnataka) May 29, 2022
ನಟ ಜಗ್ಗೇಶ್ ಟಿಕೆಟ್ ನೀಡುವ ಮೂಲಕ ಯಶವಂತಪುರ ಕ್ಷೇತ್ರದಲ್ಲಿ ಒತ್ತಡ ಕಡಿಮೆ ಮಾಡಿದ್ದು, ಎಸ್.ಟಿ ಸೋಮಶೇಖರ್ ರಿಲೀಫ್ ನೀಡುವ ಕೆಲಸ ಹೈಕಮಾಂಡ್ ಮಾಡಿದೆ. ಜೆಡಿಎಸ್ ಜೊತೆಗೆ ಮಾತುಕತೆ ಅಂತ್ಯವಾಗದ ಹಿನ್ನೆಲೆ ಮೂರನೇ ಅಭ್ಯರ್ಥಿ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಜೆಡಿಎಸ್‍ನಿಂದ ಕುಪೇಂದ್ರ ರೆಡ್ಡಿ ಹೆಸರು ಮುನ್ನೆಲೆಯಲ್ಲಿದ್ದು ಅವರು ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ಹಿನ್ನಲೆ ಬಿಜೆಪಿ ಕಾದು ನೋಡುವ ತಂತ್ರಕ್ಕೆ ಮಣೆ ಹಾಕಿದೆ.