ಹಾಸನ: ಮೂರು ವರ್ಷ ಪ್ರಾಯದ ಗಂಡು ಹುಲಿ (Tiger) ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಹಾಸನದ (Hassan) ಬೇಲೂರು ತಾಲೂಕಿನ ರಾಮದೇವರಹಳ್ಳದ ಬಳಿ ನಡೆದಿದೆ.
ಹುಲಿಯನ್ನು ಕೆಲ ದಿನಗಳ ಹಿಂದೆ ಮೈಸೂರಿನಲ್ಲಿ (Mysuru) ಸೆರೆ ಹಿಡಿಯಲಾಗಿತ್ತು. ಬಳಿಕ ರೇಡಿಯೋ ಕಾಲರ್ ಅಳವಡಿಸಿ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಭದ್ರ ಅಭಯಾರಣ್ಯಕ್ಕೆ ಬಿಡಲಾಗಿತ್ತು.
ಸೋಮವಾರ (ಫೆ.10) ಹಳ್ಳದ ನೀರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಹುಲಿಯ ಮೃತದೇಹ ಸ್ಥಳೀಯರಿಗೆ ಕಾಣಿಸಿದೆ. ಕೂಡಲೇ ಅರಣ್ಯ ಇಲಾಖೆಗೆ (Forest Department) ಮಾಹಿತಿ ನೀಡಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹುಲಿಯ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಹಳೇಬೀಡು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.