Connect with us

Latest

ಸಫಾರಿ ವೇಳೆ ಪ್ರವಾಸಿಗರನ್ನು ಬೆನ್ನಟ್ಟಿದ ಹುಲಿ – ವಿಡಿಯೋ ವೈರಲ್

Published

on

– ವಾಹನದಲ್ಲಿದ್ದ ಮಹಿಳೆ ಕಕ್ಕಾಬಿಕ್ಕಿ

ಜೈಪುರ: ಹುಲಿಯೊಂದು ಪ್ರವಾಸಿಗರನ್ನು ಬೆನ್ನಟ್ಟಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ರಾಜಸ್ಥಾನದ ರಣಥಂಬೋರ್ ರಾಷ್ಟ್ರೀಯ ಉದ್ಯಾನವನದಲ್ಲಿ ಘಟನೆ ನಡೆದಿದ್ದು, ಸುಲ್ತಾನ ಎಂಬ ಹುಲಿ ಪ್ರವಾಸಿಗರ ವಾಹನವನ್ನು ಬೆನ್ನಟ್ಟಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ. ಆದರೆ ಪ್ರಾಣಿ ಪ್ರಿಯರು ಇದಕ್ಕೆ ವಿರೋಧ ವ್ಯಕ್ತಪಡಿಸಿ, ಹುಲಿ ವಾಹನವನ್ನು ಬೆನ್ನಟ್ಟಿಲ್ಲ ಬದಲಿಗೆ ಆಟವಾಡುತ್ತಿದೆ ಎಂದು ಹೇಳಿದ್ದಾರೆ.

ಕಾಡು ಪ್ರಾಣಿಗಳು ತಮ್ಮ ವಾಸಸ್ಥಾನವನ್ನು ಕಳೆದುಕೊಂಡಿರುವುದರಿಂದ ಈ ರೀತಿ ಮಾಡುತ್ತಿವೆ ಎಂದು ಕೆಲವರು ಹೇಳಿದ್ದಾರೆ. ಆದರೆ ವರದಿಯ ಪ್ರಕಾರ ರಾಷ್ಟ್ರೀಯ ಉದ್ಯಾನ ಹೆಚ್ಚು ಹುಲಿಗಳ ತಾಣವಾಗಿದೆ. ತನ್ನ ಸಾಮರ್ಥ್ಯಕ್ಕಿಂತಲೂ ಹೆಚ್ಚು ಹುಲಿಗಳನ್ನು ಹೊಂದಿದೆ ಎಂದು ವರದಿಯಾಗಿದೆ.

ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರ ಹತ್ತಿರದ ಅಟಲ್ ಬಿಹಾರಿ ವಾಜಪೇಯಿ ಜಿಯೋಲಾಜಿಕಲ್ ಪಾರ್ಕಿನಲ್ಲಿ ಸಹ ಈ ಹಿಂದೆ ಸಿಂಹವೊಂದು ಸಫಾರಿಗೆ ಹೋದವರನ್ನು ಅಟ್ಟಾಡಿಸಿಕೊಂಡು ಬಂದಿತ್ತು. ಇದನ್ನು ಕಂಡ ಯುವಕರು ನಮಗೆ ಸಫಾರಿ ಸಾಕು ನಮ್ಮನ್ನು ಬಿಟ್ಟು ಬಿಡಿ ಎಂದು ಚಾಲಕನಲ್ಲಿ ಗೋಗರೆದಿದ್ದರು. ಈ ದೃಶ್ಯವನ್ನು ಪ್ರವಾಸಿಗರು ತಮ್ಮ ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದರು. ಈ ವಿಡಿಯೋ ಸಹ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಅಲ್ಲದೆ ಇತ್ತೀಚೆಗೆ ಮಹಾರಾಷ್ಟ್ರದ ಚಂದ್ರಾಪುರದ ಅಂಧೇರಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹುಲಿ ಪ್ರವಾಸಿಗರ ವಾಹನವನ್ನು ಬೆನ್ನಟ್ಟಿತ್ತು. ಈ ವಿಡಿಯೋ ಸಾಕಷ್ಟು ವೈರಲ್ ಆಗಿತ್ತು. ಚಂದ್ರಾಪುರದ ಸಂರಕ್ಷಿತ ಪ್ರದೇಶದಲ್ಲಿ ಇದೇ ಮೊದಲಲ್ಲ. ಹಲವು ಬಾರಿ ಹುಲಿಗಳು ಪ್ರವಾಸಿ ವಾಹನವನ್ನು ಬೆನ್ನಟ್ಟಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

Click to comment

Leave a Reply

Your email address will not be published. Required fields are marked *