ನಿನ್ನೆಯಷ್ಟೇ ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಅರಣ್ಯಾಧಿಕಾರಿಗಳು ದರ್ಶನ್ (Darshan) ಅವರಿಗೆ ನೋಟಿಸ್ ನೀಡಿದ್ದರು. ನೋಟಿಸ್ ಗೆ ಸಂಬಂಧಪಟ್ಟಂತೆ ದರ್ಶನ್ ಇವತ್ತು ಉತ್ತರ ನೀಡುತ್ತಾರೆ ಎಂದು ಹೇಳಲಾಗಿತ್ತು. ಆದರೆ, ಇಂದು ದರ್ಶನ್ ಉತ್ತರ ನೀಡುತ್ತಿಲ್ಲ ಎನ್ನುವುದು ಗೊತ್ತಾಗಿದೆ. ಈ ಹಿಂದೆಯೇ ನಿಗದಿಯಾದಂತೆ ಕಾಟೇರ (Katera) ಸಿನಿಮಾದ ಶೂಟಿಂಗ್ ಗಾಗಿ ದರ್ಶನ್ ಇಂದು ಗುಜರಾತ್ (Gujarat)ಗೆ ಪ್ರಯಾಣ ಬೆಳಸಲಿದ್ದಾರೆ.
ಬೆಳಗ್ಗೆ ಬೆಂಗಳೂರಿನಿಂದ ಮೈಸೂರಿಗೆ ಹೊರಟಿರುವ ದರ್ಶನ್. ಆನಂತರ ಸಾಯಂಕಾಲ 4 ಗಂಟೆಗೆ ವಿಮಾನದ ಟಿಕೆಟ್ ಬುಕ್ ಆಗಿರುವುದರಿಂದ ಮತ್ತೆ ಬೆಂಗಳೂರಿಗೆ ಆಗಮಿಸಿ, ವಿಮಾನ ಏರಲಿದ್ದಾರೆ. ನಿನ್ನೆ ದರ್ಶನ್ ಮನೆಯಲ್ಲಿ ಹುಲಿ ಉಗುರಿನ ಶೋಧ ಕಾರ್ಯ ನಡೆಸಿದ್ದರು ಅರಣ್ಯ ಅಧಿಕಾರಿಗಳು. ಈ ಪ್ರಕರಣಕ್ಕೆ ದರ್ಶನ್ ಸಂಪೂರ್ಣ ಸಹಕಾರ ನೀಡಿರುವುದಾಗಿಯೂ ಅಧಿಕಾರಿಗಳು ಹೇಳಿಕೊಂಡಿದ್ದರು.
ಕಾಫಿನಾಡಿನಲ್ಲಿ ಅರ್ಚಕರ ಬಂಧನ
ಕಾಫಿನಾಡು ಚಿಕ್ಕಮಗಳೂರಿನಲ್ಲಿ (Chikkamagaluru) ಹುಲಿ ಉಗುರು (Tiger Claw) ಕಾರ್ಯಚರಣೆ ಮುಂದುವರೆದಿದ್ದು, ಹುಲಿ ಉಗುರಿನ ಡಾಲರ್ (Dollar) ಹಾಕಿಕೊಂಡಿದ್ದ ಇಬ್ಬರು ಅರ್ಚಕರನ್ನು ಬಂಧಿಸಲಾಗಿದೆ. ಖಾಂಡ್ಯ ಮಾರ್ಕಾಂಡೇಶ್ವರ ದೇವಾಲಯದ ಇಬ್ಬರು ಅರ್ಚಕರನ್ನು (Priest) ಬಾಳೆಹೊನ್ನೂರು ಅರಣ್ಯ ವಲಯದ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಅರ್ಚಕರನ್ನು ಕೃಷ್ಣಾನಂದ ಹೊಳ್ಳ, ನಾಗೇಂದ್ರ ಜೋಯಿಸ ಎಂದು ಗುರುತಿಸಲಾಗಿದೆ. ಬಂಧಿತರಿಂದ ಒಟ್ಟು ಮೂರು ಹುಲಿ ಉಗುರನ್ನು ವಶಕ್ಕೆ ಪಡೆಯಲಾಗಿದೆ.
ಅರಣ್ಯ ಇಲಾಖೆಯ ಸಿಬ್ಬಂದಿ ಇಬ್ಬರು ಅರ್ಚಕರನ್ನು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರು ಅರ್ಚಕರ ವಿರುದ್ಧ ಬಾಳೆಹೊನ್ನೂರು ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಧಿತರು ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ದೇವಸ್ಥಾನದಲ್ಲಿ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದರು.
Web Stories