ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಹುಲಿ ಉಗುರು (Tiger Claw) ಧರಿಸಿದವರ ವಿರುದ್ಧ, ಅರಣ್ಯಾಧಿಕಾರಿಗಳು ಕ್ರಮಕ್ಕೆ ಮುಂದಾಗಿದ್ದಾರೆ. ನಿನ್ನೆಯಷ್ಟೇ ದರ್ಶನ್, ನಿಖಿಲ್ ಕುಮಾರ್, ಜಗ್ಗೇಶ್ ಸೇರಿದಂತೆ ಹಲವರಿಗೆ ನೋಟಿಸ್ ಜಾರಿ ಮಾಡಿದ್ದರು. ಜೊತೆಗೆ ಅವರ ನಿವಾಸಕ್ಕೂ ಅಧಿಕಾರಿಗಳು ತೆರಳಿ ದಾಳಿ ಮಾಡಿದ್ದರು. ಇದನ್ನು ಪ್ರಶ್ನಿಸಿ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಹೈಕೋರ್ಟ್ ಮೆಟ್ಟಿಲು ಏರಿದ್ದಾರೆ.
Advertisement
ನಿನ್ನೆ ಅರಣ್ಯಾಧಿಕಾರಿಗಳ ದಾಳಿ ಕಾನೂನು ಬಾಹಿರ. ಅರಣ್ಯಾಧಿಕಾರಿಗಳ ಕ್ರಮ ಸರಿ ಇಲ್ಲ ಎಂದು ಹೈಕೋರ್ಟಿ (High Court)ಗೆ ಜಗ್ಗೇಶ್ (Jaggesh) ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಅರಣ್ಯಾಧಿಕಾರಿಗಳ ನಡೆ ಕಾನೂನು ಬಾಹಿರ ಎಂದು ಘೋಷಿಸಲು ಮನವಿ ಮಾಡಿಕೊಂಡಿದ್ದಾರೆ. ಜೊತೆಗೆ ಅರಣ್ಯಾಧಿಕಾರಿಗಳು ಕೊಟ್ಟಿರುವ ನೋಟೀಸ್ ಅನ್ನು ರದ್ದು ಪಡಿಸಲು ನಟ ಜಗ್ಗೇಶ್ ಮನವಿ ಸಲ್ಲಿಸಿದ್ದಾರೆ.
Advertisement
Advertisement
ನೋಟೀಸ್ ಗೆ ಉತ್ತರ ನೀಡುವ ಮುನ್ನವೇ ದಾಳಿ ಮಾಡಿದ್ದಾರೆ. ಪರಶೀಲನೆ ನೆಪದಲ್ಲಿ ಮನೆಯ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ. ಸಂದರ್ಶನದಲ್ಲಿ ಹೇಳಿದ ಮಾತನ್ನ ಆಧರಿಸಿ ತೇಜೋವಧೆ ಮಾಡಲಾಗುತ್ತಿದ್ದೆ ಎಂದು ನಟ ಜಗ್ಗೇಶ್ ಅರ್ಜಿಯಲ್ಲಿ ಉಲ್ಲೇಖ ಮಾಡಿದ್ದಾರೆ.
Advertisement
ತಪ್ಪಿದ್ದರೆ ಕ್ರಮ ತೆಗೆದುಕೊಳ್ಳಲಿ
ಕಾನೂನಿನ ಮುಂದೆ ಎಲ್ಲರೂ ಒಂದೇ. ಅವರು ಯಾವುದೇ ಪಕ್ಷದಲ್ಲಿ ಇರಲಿ, ಎಂತಹ ಗಣ್ಯ ವ್ಯಕ್ತಿಗಳೇ ಆಗಿರಲಿ. ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರೆ ಕ್ರಮ ತಗೆದುಕೊಳ್ಳಲಿ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ಇಂತಹ ಪ್ರಕರಣವನ್ನು ಅರಣ್ಯ ಸಚಿವರು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ ಈ ಪ್ರಕರಣದಲ್ಲಿ ಬಂಧನವಾಗುತ್ತಿದ್ದಂತೆಯೇ ನಟರಾದ ಜಗ್ಗೇಶ್, ದರ್ಶನ್, ನಿಖಿಲ್ ಕುಮಾರ ಸ್ವಾಮಿ, ವಿನಯ್ ಗುರೂಜಿ ಸೇರಿದಂತೆ ಹಲವರ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿದವು. ಅರಣ್ಯಾಧಿಕಾರಿಗಳು ಎಚ್ಚೆತ್ತುಕೊಂಡು ನೋಟಿಸ್ ನೀಡಲು ಮುಂದಾದರು. ಇದೀಗ ಬಹುತೇಕ ಎಲ್ಲರಿಗೂ ನೋಟಿಸ್ ಜಾರಿ ಮಾಡಲಾಗಿದೆ.
Web Stories