ಹುಲಿ ಉಗುರು ಧರಿಸಿದ್ದ ಆರೋಪ ಹೊತ್ತಿರುವ ನಟ ಜಗ್ಗೇಶ್ ಮನೆಗೆ ಇಂದು (ಬುಧವಾರ) ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿದರು. ಈ ವೇಳೆ ಜಗ್ಗೇಶ್ ಪತ್ನಿ ಪರಿಮಳಾ ಅವರು, ಪೂಜೆ ಮಾಡಿದ್ದ ಇಟ್ಟಿದ್ದ ಪೆಂಡೆಂಟ್ ಅನ್ನು ಅಧಿಕಾರಿಗಳಿಗೆ ನೀಡಿದ್ದಾರೆ.
ಮಲ್ಲೇಶ್ವರಂನಲ್ಲಿರುವ ಜಗ್ಗೇಶ್ (Jaggesh) ಮನೆಗೆ ಆರ್ಎಫ್ಒ ನೇತ್ರಾವತಿ ಅವರ ನೇತೃತ್ವದಲ್ಲಿ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ವತಃ ಡಿಸಿಎಫ್ ರವೀಂದ್ರ ಅವರು ಕೂಡ ಭೇಟಿ ಕೊಟ್ಟಿದ್ದರು. ಈ ವೇಳೆ ಜಗ್ಗೇಶ್ ಅವರ ಪತ್ನಿ ಪೆಂಡೆಂಟ್ ಅನ್ನು ಅಧಿಕಾರಿಗಳಿಗೆ ನೀಡಿದ್ದಾರೆ. ಪೂಜೆ ಮಾಡಿ ಇಟ್ಟುಕೊಂಡಿದ್ದೆವು ಎಂದು ಅಧಿಕಾರಿಗಳಿಗೆ ಈ ವೇಳೆ ತಿಳಿಸಿದ್ದಾರೆ. ಇದನ್ನೂ ಓದಿ: ಹುಲಿ ಉಗುರಿನ ಸಂಕಷ್ಟ- ದರ್ಶನ್ ಮನೆಗೆ ಅರಣ್ಯಾಧಿಕಾರಿಗಳ ಭೇಟಿ
Advertisement
Advertisement
ಈ ಕುರಿತು ಮಾತನಾಡಿರುವ ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರ, ನೋಟಿಸ್ ಕೊಟ್ಟಿದ್ದೇವೆ. ಅದಕ್ಕೆ ಪೆಂಡೆಂಟ್ ಕೊಟ್ಟಿದ್ದಾರೆ. ನಾವು ಯಾವುದೇ ತಪಾಸಣೆ ನಡೆಸಲಿಲ್ಲ. ಜಗ್ಗೇಶ್ ಮಡದಿ ಪೆಂಡೆಂಟ್, ಲಾಕೆಟ್ ಕೊಟ್ಟಿದ್ದಾರೆ. ಜಗ್ಗೇಶ್ ಹೋಗುವಾಗ ಕೊಟ್ಟು ಹೋಗಿದ್ದಾರೆ. ಅವರು ಮನೆಯಲ್ಲಿ ಇರಲಿಲ್ಲ ಎಂದು ಮಾಹಿತಿ ನೀಡಿದ್ದಾರೆ.
Advertisement
ಜಗ್ಗೇಶ್ ಅವರಿಗೆ ತಾಯಿ ಕೊಟ್ಟಿದ್ದು. ಪೂಜೆ ಮಾಡಿ ಇಟ್ಟುಕೊಂಡಿದ್ದೇವೆ ಎಂದಿದ್ದಾರೆ. 40 ವರ್ಷದಷ್ಟು ಹಳೆಯದಾಗಿದೆ ಪೆಂಡೆಂಟ್. ಹೀಗಾಗಿ ಡಿಎನ್ಎ ಪರೀಕ್ಷೆ ಮಾಡಲು ಡೆಹ್ರಾಡೂನ್ಗೆ ಲ್ಯಾಬ್ಗೆ ಕಳುಹಿಸಲಾಗುತ್ತದೆ. ಜಗ್ಗೇಶ್ ಮನೆಯಲ್ಲಿ ಸಿಕ್ಕ ಪೆಂಡೆಂಟ್ ಕೊಳೆತ ಸ್ಥಿತಿಯಲ್ಲಿ ಇದ್ದು, ಪ್ರಾಥಮಿಕವಾಗಿ ಗೊತ್ತಾಗುತ್ತಿಲ್ಲ. ಸ್ವಲ್ಪ ದಿನ ಸಮಯ ತೆಗೆದುಕೊಳ್ಳುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಹುಲಿ ಉಗುರು ಕಂಟಕ: ದರ್ಶನ್, ಜಗ್ಗೇಶ್, ನಿಖಿಲ್ ಕ್ರಮಕ್ಕೆ ಒತ್ತಾಯ
Advertisement
ಮೊದಲು ಪರಿಶೀಲನೆಗೆ ಲ್ಯಾಬ್ಗೆ ಕಳುಹಿಸಿ, ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಅದು ನೈಜವಾಗಿದ್ದಲ್ಲಿ ಅವರನ್ನ ಕರೆಸಿ ವಿಚಾರಣೆ ಮಾಡಲಾಗುತ್ತದೆ. ಅದು ಹುಲಿಯ ಉಗುರಾಗಿದ್ದರೆ ಕಾನೂನುಬದ್ಧವಾಗಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
Web Stories