ಚಾಮರಾಜನಗರ: ಗುಂಡಾಲ್ ಡ್ಯಾಂನಲ್ಲಿ ಉರುಳಿಗೆ ಸಿಲುಕಿ ಹುಲಿ ಸಾವು ಪ್ರಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಉರುಳು ಹಾಕಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ.
ಕುಮಾರ್ ಬಂಧಿತ ಆರೋಪಿ. ಕೊಳ್ಳೇಗಾಲ ತಾಲೂಕಿನ ಕೊಂಗರಹಳ್ಳಿ ಗ್ರಾಮದ ವ್ಯಕ್ತಿಯನ್ನು ಅರೆಸ್ಟ್ ಮಾಡಲಾಗಿದೆ. ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆ ಅರಣ್ಯ ಇಲಾಖೆ ಕಸ್ಟಡಿಗೆ ಪಡೆದಿದೆ. ಇದನ್ನೂ ಓದಿ: ನಾಗರಹೊಳೆ, ಬಂಡೀಪುರದಲ್ಲಿ ಸಫಾರಿಗೆ ಸರ್ಕಾರ ಅಸ್ತು – ಹೋರಾಟದ ಎಚ್ಚರಿಕೆ ಕೊಟ್ಟ ರೈತರು
ಪ್ರಕರಣದಲ್ಲಿ ಇನ್ನೂ ಹೆಚ್ಚು ಮಂದಿ ಇರುವ ಸಾಧ್ಯತೆ ಹಿನ್ನೆಲೆ ಅರಣ್ಯಾಧಿಕಾರಿಗಳು ತನಿಖೆಗೆ ಒಳಪಡಿಸಿದ್ದಾರೆ.
ಸ್ಕೂಟರ್ ಕ್ಲಚ್ ವೈರ್ ಉರುಳಿಗೆ ಹುಲಿ ಬಲಿಯಾಗಿತ್ತು. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಗುಂಡಾಲ್ ಡ್ಯಾಂನಲ್ಲಿ ಹುಲಿಯ ಕಳೇಬರ ಸಿಕ್ಕಿತ್ತು. ಇದನ್ನೂ ಓದಿ: ನಾಳೆಯಿಂದ ನಾಗರಹೊಳೆ, ಬಂಡೀಪುರದಲ್ಲಿ ಸಫಾರಿ ಪುನರಾರಂಭ

