ಮುಂಬೈ: ಬಾಲಿವುಡ್ ನಟ ಟೈಗರ್ ಶ್ರಾಫ್ (Tiger Shroff) ಕಾರಿನ ಮೇಲೆ ಗುಂಡಿನ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರು ಸೇರಿ ಮತ್ತೆ ನಾಲ್ವರನ್ನು ದೆಹಲಿ ಪೊಲೀಸರು (Delhi Police) ಅರೆಸ್ಟ್ ಮಾಡಿದ್ದಾರೆ.
ಬಂಧಿತ ಆರೋಪಿಗಳನ್ನು ಕುನಾಲ್ (21), ಸುಮಿತ್ (19), ರಾಧಾ (23) ಮತ್ತು ಬಬಿತಾ (23) ಎಂದು ಗುರುತಿಸಲಾಗಿದೆ. ದೆಹಲಿ ಪೊಲೀಸ್ ಸ್ಪೆಷಲ್ ಸೆಲ್ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರನ್ನು ಬಂಧಿಸಿದ್ದು, ಈ ಪೈಕಿ ಅಪ್ರಾಪ್ತ ಬಾಲಕಿಯೊಬ್ಬಳನ್ನು ಕೂಡ ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ:ಟೈಗರ್ ಶ್ರಾಫ್ ಕಾರಿನ ಮೇಲೆ ಶೂಟೌಟ್ – ಆರೋಪಿಗಳಿಗೆ 34,000 ಹಣ, ವಿದೇಶದಲ್ಲಿ ಉದ್ಯೋಗದ ಸುಪಾರಿ, ರೋಚಕ ಅಂಶ ಬಹಿರಂಗ
ಪೊಲೀಸ್ ಮೂಲಗಳ ಪ್ರಕಾರ, ಬಂಧಿತ ಆರೋಪಿಗಳು ಸೋನಿಪತ್ ಮತ್ತು ದೆಹಲಿಯವರಾಗಿದ್ದು, ಇಬ್ಬರು ಯುವಕರು ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಿ ಮಹಿಳೆಯರಿಗೆ ಹಸ್ತಾಂತರಿಸಿದ್ದರು. ನಂತರ ಮಹಿಳೆಯರು ಮುಂಬೈಗೆ ಪ್ರಯಾಣ ಬೆಳೆಸಿ ತಮ್ಮ ಸದಸ್ಯರಿಗೆ ಶಸ್ತ್ರಾಸ್ತ್ರಗಳನ್ನು ತಲುಪಿಸುತ್ತಿದ್ದರು ಎಂದು ತಿಳಿಸಿದ್ದಾರೆ.
ದೆಹಲಿ ಪೊಲೀಸ್ ಸ್ಪೆಷಲ್ ಸೆಲ್ ಪ್ರಕಾರ, ನವದೆಹಲಿ ರೇಂಜ್ ಘಟಕದಿಂದ ಆರೋಪಿಗಳನ್ನು ಬಂಧಿಸಲಾಗಿದ್ದು, ಬಿಎನ್ಎಸ್ಎಸ್ 35(1)(ಬಿ) ಅಡಿಯಲ್ಲಿ ಬಂಧಿಸಲು ಅನುಮತಿ ಕೋರಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ನ್ಯಾಯಾಲಯ ಅರ್ಜಿ ಪುರಸ್ಕರಿಸಿದ ಬಳಿಕ ಮುಂಬೈ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಆಗಿದ್ದೇನು?
ಅ.18ರಂದು ಮುಂಬೈನ ಜುಹು ಪ್ರದೇಶದಲ್ಲಿ ಬಾಲಿವುಡ್ ನಟ ಟೈಗರ್ ಶ್ರಾಫ್ ಅವರು ತಮ್ಮ ಕಾರಿನಲ್ಲಿ ಹೊರಟಿದ್ದರು. ಅವರನ್ನು ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಜನ ಆಗಮಿಸಿದ್ದರು. ಈ ವೇಳೆ ಅವರ ಕಾರನ್ನು ಗುರಿಯಾಗಿಸಿ ಮೂವರು ದುಷ್ಕರ್ಮಿಗಳು ಏಳು ಸುತ್ತು ಗುಂಡುಗಳನ್ನು ಹಾರಿಸಲಾಗಿದೆ. ಅದೃಷ್ಟವಶಾತ್ ಟೈಗರ್ ಶ್ರಾಫ್ ಸುರಕ್ಷಿತವಾಗಿದ್ದು, ಯಾವುದೇ ಗಾಯಗಳಾಗಿಲ್ಲ. ಆದರೆ ಅವರ ಚಾಲಕ ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ. ಇದನ್ನೂ ಓದಿ: Tiger Shroff Firing |50 ಸಾವಿರ ಅಡ್ವಾನ್ಸ್ ಪಡೆದು ಶೂಟ್ – ಟೈಗರ್ ಫೈರಿಂಗ್ ಟೈಮ್ ಲೈನ್
