ಬಾಲಿವುಡ್ ನಟ ಟೈಗರ್ ಶ್ರಾಫ್ ( Attack On Tiger Shroff) ಕಾರಿನ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಮತ್ತೆ ಇಬ್ಬರು ಆರೋಪಿಗಳನ್ನು (Mumbai Police) ಬಂಧಿಸಿದ್ದಾರೆ.
ಹರಿಯಾಣದ ಸೋನಿಪತ್ನಲ್ಲಿ ಸಮೀರ್ ಮತ್ತು ಜತಿನ್ ಎಂಬ ಆರೋಪಿಗಳನ್ನು ಮುಂಬೈ ಪೊಲೀಸರ ಅಪರಾಧ ವಿಭಾಗ ಬಂಧಿಸಿದೆ. ಪ್ರಕರಣದಲ್ಲಿ ಶಸ್ತ್ರಾಸ್ತ್ರಗಳನ್ನು ಪೂರೈಸಿದ ಆರೋಪ ಇವರ ಮೇಲಿದೆ. ಈ ಇಬ್ಬರ ಬಂಧನದೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.
ಗುಂಡಿನ ದಾಳಿ ಪ್ರಕರಣದಲ್ಲಿ ಬಳಸಲಾಗಿದೆ ಎನ್ನಲಾದ ಶಸ್ತ್ರಾಸ್ತ್ರಗಳ ಪೂರೈಕೆಯಲ್ಲಿ ಸಮೀರ್ ಮತ್ತು ಜತಿನ್ ಪ್ರಮುಖ ಪಾತ್ರ ವಹಿಸಿದ್ದಾರೆ. ಸದ್ಯ ಇಬ್ಬರ ಬಂಧನಕ್ಕೆ ಸಂಬಂಧಿಸಿದ ಕಾನೂನು ಪ್ರಕ್ರಿಯೆ ನಡೆಯುತ್ತಿದೆ. ಆರೋಪಿಗಳನ್ನು ಸೋನಿಪತ್ ನ್ಯಾಯಾಲಯಕ್ಕೆ ಹಾಜರುಪಡಿಸಿ ಟ್ರಾನ್ಸಿಟ್ ರಿಮಾಂಡ್ ಪಡೆಯಲು ಪೊಲೀಸರು ಮುಂದಾಗಿದ್ದಾರೆ. ಬಳಿಕ ಹೆಚ್ಚಿನ ವಿಚಾರಣೆಗಾಗಿ ಅವರನ್ನು ಮುಂಬೈಗೆ ಕರೆತರಲಾಗುತ್ತದೆ.
ಗುಂಡಿನ ದಾಳಿಯ ಹಿಂದೆ ಯಾರಿದ್ದಾರೆ? ಶಸ್ತ್ರಾಸ್ತ್ರಗಳನ್ನು ಎಲ್ಲಿಂದ ತರಲಾಗಿತ್ತು? ಈ ಕೃತ್ಯಕ್ಕೆ ಕಾರಣವೇನು? ಎಂಬುದರ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನದ ಕೋಟಾದಿಂದ ಬಂಧಿಸಿ ಮುಂಬೈಗೆ ಕರೆತರಲಾಗಿದ್ದ ಮೂವರು ಆರೋಪಿಗಳನ್ನು ಬುಧವಾರ ಎಸ್ಪ್ಲನೇಡ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಮುಂಬೈ ಪೊಲೀಸರ ಸುಲಿಗೆ ವಿರೋಧಿ ಘಟಕವು ಆರೋಪಿಗಳನ್ನು ಬೆಳಗಿನ ಜಾವ 3 ಗಂಟೆ ಸುಮಾರಿಗೆ ನಗರಕ್ಕೆ ಕರೆತಂದಿತ್ತು ಎಂದು ವರದಿಯಾಗಿದೆ.
ನ್ಯಾಯಾಲಯಕ್ಕೆ ಹಾಜರುಪಡಿಸುವ ಮೊದಲು ಆರೋಪಿಗಳಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿತ್ತು. ವಿಚಾರಣೆ ವೇಳೆ ಬಂಧನದ ಸಮಯದ ಬಗ್ಗೆಯೂ ನ್ಯಾಯಾಲಯ ಪೊಲೀಸರನ್ನು ಪ್ರಶ್ನಿಸಿತ್ತು. ಆರೋಪಿಗಳ ಪೈಕಿ ಒಬ್ಬಾತ ಅ. 19ರ ಬೆಳಗ್ಗೆ ತನ್ನನ್ನು ಬಂಧಿಸಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾನೆ.ಇದನ್ನೂ ಓದಿ: ಐದು ಭಾಷೆಗಳಲ್ಲಿ ಬರಲಿದೆ ನವರಸನ್ ನಿರ್ದೇಶನದ ಆದಿ ರುದ್ರ
ಗುಂಡಿನ ದಾಳಿಯ ಹಿಂದಿನ ಉದ್ದೇಶವನ್ನು ಪತ್ತೆಹಚ್ಚುವುದೂ ತನಿಖೆಯ ಪ್ರಮುಖ ಭಾಗವಾಗಿದೆ ಎಂದು ಪ್ರಾಸಿಕ್ಯೂಷನ್ ವಾದಿಸಿತ್ತು. ಪೊಲೀಸರು 14 ದಿನಗಳ ಕಸ್ಟಡಿಗೆ ಮನವಿ ಮಾಡಿದ್ದರೂ, ನ್ಯಾಯಾಲಯ ಮೂವರು ಆರೋಪಿಗಳನ್ನು ಅಕ್ಟೋಬರ್ 31ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ.ಇದನ್ನೂ ಓದಿ: ಟೈಗರ್ ಶ್ರಾಫ್ ಕಾರಿನ ಮೇಲೆ ಶೂಟೌಟ್ ಬಳಿಕ ಬಾಲಿವುಡ್ ನಟರ ನಿವಾಸಗಳಿಗಿದ್ದ ಭದ್ರತೆ ಹೆಚ್ಚಳ
