ಮುಂಬೈ: ಬಾಲಿವುಡ್ ನಟ ಟೈಗರ್ ಶ್ರಾಫ್ (Tiger Shroff) ಕಾರಿನ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣದ ಆರೋಪಿಗಳು ದಾಳಿ ನಂತರ ಪರಾರಿಯಾಗಲು ಬಳಸಿದ್ದ ಬೈಕ್ ಅನ್ನು ಪೊಲೀಸರು ವಶಪಡಿಸಕೊಂಡಿದ್ದಾರೆ.
ಮುಂಬೈನ (Mumbai) ಅಂಧೇರಿ ರೈಲು ನಿಲ್ದಾಣದ (Andheri Railway Station) ಬಳಿ ಪೊಲೀಸರು ಬೈಕ್ ಅನ್ನು ವಶಪಡಿಸಿಕೊಂಡಿದ್ದು, ಸದ್ಯ ಬೈಕ್ನ ನಂಬರ್ ಪ್ಲೇಟ್ ಆಧಾರದ ಮೇಲೆ ಮಾಲೀಕರನ್ನು ಪತ್ತೆ ಹಚ್ಚಲು ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಜೊತೆಗೆ ಆರೋಪಿಗಳು ಅಲ್ಲಿಂದ ರೈಲಿನಲ್ಲಿ ಪ್ರಯಾಣ ಬೆಳೆಸಿ ಪರಾರಿಯಾಗಿರಬಹುದು ಎಂದು ಶಂಕಿಸಿದ್ದಾರೆ. ಇದನ್ನೂ ಓದಿ: ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ – ಓರ್ವ ಅಪ್ರಾಪ್ತ ಸೇರಿ ಮೂವರು ಅರೆಸ್ಟ್
ಘಟನಾ ಸ್ಥಳದಿಂದ ಫೊರೆನ್ಸಿಕ್ ತಂಡಗಳು ಸಾಕ್ಷ್ಯಗಳನ್ನು ಸಂಗ್ರಹಿಸಿದ್ದು, ಎಷ್ಟು ಸುತ್ತು ಗುಂಡು ಹಾರಿಸಲಾಗಿದೆ ಎಂಬುದನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಈಗಾಗಲೇ ಪೊಲೀಸರು ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.
ಇನ್ನೂ ದಾಳಿಯ ಹೊಣೆಯನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ (ಅನಿಲ್ ಪಂಡಿತ್ ಮತ್ತು ಹರ್ಮನ್ ಸಿಂಧು) ಸಾಮಾಜಿಕ ಜಾಲತಾಣದ ಮೂಲಕ ಹೊತ್ತುಕೊಂಡಿದೆ. ಆದರೆ ಈ ಬಗ್ಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಸಿಎಂ ಹಾಗೂ ಡಿಸಿಎಂ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.ಇದನ್ನೂ ಓದಿ: 45 ನಿಮಿಷ ಕಾದು ಕುಳಿತಿದ್ದ ಶೂಟರ್ಸ್ – ಪಿಸ್ತೂಲ್ ಜಾಮ್ ಆಗಿದ್ದರಿಂದ ಬದುಕುಳಿದ್ರಾ ನಟ ಟೈಗರ್ ಶ್ರಾಫ್?
ಆಗಿದ್ದೇನು?
ಪ್ರಾಥಮಿಕ ಮಾಹಿತಿಯ ಪ್ರಕಾರ, ಅ.18ರಂದು ಮುಂಬೈನ ಜುಹು ಪ್ರದೇಶದಲ್ಲಿ ಬಾಲಿವುಡ್ ನಟ ಟೈಗರ್ ಶ್ರಾಫ್ ಅವರು ತಮ್ಮ ಕಾರಿನಲ್ಲಿ ಹೊರಟಿದ್ದರು. ಅವರನ್ನು ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಜನ ಆಗಮಿಸಿದ್ದರು. ಈ ವೇಳೆ ಅವರ ಕಾರನ್ನು ಗುರಿಯಾಗಿಸಿ ಮೂವರು ದುಷ್ಕರ್ಮಿಗಳು ಏಳು ಸುತ್ತು ಗುಂಡುಗಳನ್ನು ಹಾರಿಸಲಾಗಿದೆ. ಅದೃಷ್ಟವಶಾತ್ ಟೈಗರ್ ಶ್ರಾಫ್ ಸುರಕ್ಷಿತವಾಗಿದ್ದು, ಯಾವುದೇ ಗಾಯಗಳಾಗಿಲ್ಲ. ಆದರೆ ಅವರ ಚಾಲಕ ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ.ಇದನ್ನೂ ಓದಿ: ಟೈಗರ್ ಶ್ರಾಫ್ ಕಾರಿನ ಮೇಲೆ ಶೂಟೌಟ್ – ಆರೋಪಿಗಳ ಫಸ್ಟ್ ಫೋಟೋ ರಿಲೀಸ್
