ಮಡಿಕೇರಿ: ವರ್ಷವಿಡೀ ಕಾಡಾನೆ ಹಾವಳಿಯಿಂದ ಕಂಗೆಡುತ್ತಿದ್ದ ಕೊಡಗು (Kodagu) ಜಿಲ್ಲೆಯ ಜನರು ಇದೀಗ ಹುಲಿಯ ಹಾವಳಿಯಿಂದ ಭಯಗೊಂಡಿದ್ದಾರೆ. ಇಲ್ಲಿನ ಗ್ರಾಮೀಣ ಭಾಗದಲ್ಲಿ ದನಕರುಗಳನ್ನು ಬಲಿ ಪಡೆಯುತ್ತಿದ್ದ ವ್ಯಾಘ್ರವೊಂದು ಇದೀಗ ವಿರಾಜಪೇಟೆ (Virajpet) ನಗರ ಪ್ರದೇಶದ ರಾಜ್ಯ ಹೆದ್ದಾರಿ ಬದಿಯಲ್ಲೇ ಕಾಣಿಸಿಕೊಂಡಿದೆ.
Advertisement
ವಿರಾಜಪೇಟೆ-ಮಡಿಕೇರಿ ಮುಖ್ಯರಸ್ತೆಯಲ್ಲಿರುವ ಕುಕ್ಲೂರು ಮುತ್ತಪ್ಪ ದೇವಸ್ಥಾನದ ಮುಂಭಾಗದಲ್ಲಿ ಹುಲಿ (Tiger) ರಸ್ತೆ ದಾಟುತ್ತಿರುವ ದೃಶ್ಯವನ್ನು ವಾಹನ ಸವಾರರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ. ಈ ವಿಷಯವನ್ನು ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಈ ಹಿನ್ನೆಲೆ ರಾಜ್ಯ ವನ್ಯಜೀವಿ ಸಂರಕ್ಷಣಾ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಅಪ್ರಾಪ್ತನಿಂದ ದ್ವಿಚಕ್ರ ವಾಹನ ಚಾಲನೆ – ಬಾಲಕನ ತಂದೆಗೆ ಬಿತ್ತು 25,000 ರೂ. ದಂಡ!
Advertisement
Advertisement
ಅರಣ್ಯ ಇಲಾಖೆ ವಿರಾಜಪೇಟೆ ಡಿಸಿಎಫ್ ಜಗನ್ನಾಥ್, ಆರ್‌ಎಫ್‌ಒ ಶಿವರಾಮ್ ಮತ್ತು ಸಿಬ್ಬಂದಿ ಹುಲಿ ಸೆರೆ ಹಿಡಿಯುವ ಕಾರ್ಯಾಚರಣೆಗೆ ಮುಂದಾಗಿದೆ. ಕಾರ್ಯಾಚರಣೆ ವೇಳೆ ಹುಲಿ ಹೆಜ್ಜೆ ಗುರುತು ಪತ್ತೆಯಾಗಿದ್ದು, ಪಟ್ಟಣದ ಪೂಮಾಲೆ ಮಂದ್ ಮೂಲಕ ವಿರಾಜಪೇಟೆ-ಮಡಿಕೇರಿ ಮುಖ್ಯರಸ್ತೆ ಬದಿಗೆ ತೆರಳಿರುವ ಶಂಕೆ ವ್ಯಕ್ತವಾಗಿದೆ.
Advertisement
ಹುಲಿ ಚಲನವಲನ ಪತ್ತೆಗೆ ಇಂದು (ಡಿ.18) ರಾತ್ರಿಯೇ ಕ್ಯಾಮೆರಾ ಅಳವಡಿಸಲು ಸಂಕೇತ್ ಪೂವಯ್ಯ ಸೂಚನೆ ನೀಡಿದ್ದಾರೆ. ಜೊತೆಗೆ ಕಾರ್ಯಾಚರಣೆಗೆ ಇನ್ನಷ್ಟು ಸಿಬ್ಬಂದಿ ಸೇರಿಸಿಕೊಳ್ಳಲು ಅರಣ್ಯಾಧಿಕಾರಿಗಳಿಗೆ ಸಲಹೆ ನೀಡಿದ್ದಾರೆ.
ಈ ಹಿಂದೆ ಸುಮಾರು ಎರಡೂವರೆ ತಿಂಗಳೂ ಕೊಡಗಿನ ಜನಕ್ಕೆ ಕಾಟ ಕೊಟ್ಟಿದ್ದ ಹುಲಿಯೊಂದು 29 ಜಾನುವಾರುಗಳನ್ನ ಬಲಿ ಪಡೆದಿತ್ತು. ಇದನ್ನೂ ಓದಿ: ಅತ್ತೆ ಮೇಲೆ ಮಚ್ಚು ಬೀಸಿ ಪರಾರಿಯಾಗುತ್ತಿದ್ದ ಅಳಿಯನನ್ನು ಬೆನ್ನಟ್ಟಿ ಹಿಡಿದ ಪೊಲೀಸರು