ಕೋಲ್ಕತ್ತಾ: ಐಸಿಸಿ ಏಕದಿನ ವಿಶ್ವಕಪ್ (ICC World Cup 2023) ಟೂರ್ನಿಯ ವೇಳಾಪಟ್ಟಿ ಪ್ರಕಟವಾದ ಬೆನ್ನಲ್ಲೇ ಕೋಲ್ಕತ್ತಾದಲ್ಲಿ ನಡೆಯುವ ಪಾಕಿಸ್ತಾನ (Pakistan) ಪಂದ್ಯಗಳಿಗೆ ಭಾರೀ ಬಿಗಿ ಭದ್ರತೆ ಒದಗಿಸುವುದಾಗಿ ಬಂಗಾಳ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಸ್ನೇಹಶಿಶ್ (Snehasish Ganguly) ತಿಳಿಸಿದ್ದಾರೆ.
ಈಗಾಗಲೇ ನಿಗದಿಯಾಗಿರುವ ವೇಳಾಪಟ್ಟಿಯ ಪ್ರಕಾರ ಹೈದರಾಬಾದ್, ಅಹಮದಾಬಾದ್, ಬೆಂಗಳೂರು, ಚೆನ್ನೈ, ಕೋಲ್ಕತ್ತಾ ಸೇರಿ ಒಟ್ಟು 5 ಮಹಾನಗರಗಳಲ್ಲಿ ಪಾಕ್‌ನ 9 ಪಂದ್ಯಗಳು ನಡೆಯಲಿವೆ. ಕೋಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ (Eden Gardens) ಪಾಕ್ ತಂಡವು ಅಕ್ಟೋಬರ್ 31ರಂದು ಬಾಂಗ್ಲಾದೇಶ ಹಾಗೂ ನವೆಂಬರ್ 12 ರಂದು ಇಂಗ್ಲೆಂಡ್ ವಿರುದ್ಧ ಸೆಣಸಲಿದೆ. ಇದರೊಂದಿಗೆ ನಿರ್ಣಾಯಕ ಪಂದ್ಯದಲ್ಲಿ ಟೀಂ ಇಂಡಿಯಾ (Team India), ದಕ್ಷಿಣ ಆಫ್ರಿಕಾ ವಿರುದ್ಧ ಇದೇ ಮೈದಾನದಲ್ಲಿ ಕಣಕ್ಕಿಳಿಯಲಿದೆ.
Advertisement
Advertisement
ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಬಂಗಾಳ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರೂ ಆಗಿರುವ ಸೌರವ್ ಗಂಗೂಲಿ ಹಿರಿಯ ಸಹೋದರ ಸ್ನೇಹಶಿಶ್ ಗಂಗೂಲಿ, ಈಡನ್ ಗಾರ್ಡನ್‌ನಲ್ಲಿ ನಡೆಯುವ ಪಾಕ್ ಪಂದ್ಯಗಳಿಗೆ ಹೆಚ್ಚಿನ ಭದ್ರತೆ ಒದಗಿಸಲಾಗುವುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ನಮ್ಮ ತಂಡದಲ್ಲಿ ಬೆಸ್ಟ್ ಪ್ಲೇಯರ್ ಇದ್ದಾನೆ, ಯಾವುದಕ್ಕೂ ತಲೆ ಕೆಡಿಸಿಕೊಳ್ಳಲ್ಲ: ವಾಸಿಂ ಅಕ್ರಂ
Advertisement
BCCI ಮತ್ತು ICC ತೆಗೆದುಕೊಂಡ ನಿರ್ಧಾರದಿಂದ ಸಂತೋಷವಾಗಿದ್ದು, ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹಾಗೂ ಐಸಿಸಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಕಳೆದ ನಾಲ್ಕು ತಿಂಗಳಿಂದ ನಾನು ಉತ್ತಮ ಪಂದ್ಯಗಳಿಗಾಗಿ ಕೆಲಸ ಮಾಡುತ್ತಿದ್ದೇನೆ. ಜಯ್ ಶಾ ಅವರು ಈಡನ್ ಗಾರ್ಡನ್ ಬಗ್ಗೆ ಉತ್ತಮ ದೃಷ್ಟಿಕೋನ ಹೊದಿದ್ದು, ಅದರಂತೆ ಉತ್ತಮ ಪಂದ್ಯಗಳನ್ನೇ ಇಲ್ಲಿ ಆಯೋಜಿಸಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ವಿಶ್ವಕಪ್ ವೇಳಾಪಟ್ಟಿ ಹೊರಬಿದ್ದ ಬೆನ್ನಲ್ಲೇ ಭಾರತಕ್ಕೆ ಬರಲು ಪಾಕ್ ಆಕ್ಷೇಪ
Advertisement
ಈ ಹಿಂದೆಯೂ ನಾವು ಭಾರತ ಮತ್ತು ಪಾಕ್ ಪಂದ್ಯಗಳಿಗೆ ಆತಿಥ್ಯ ವಹಿಸಿದ್ದೇವೆ. ಈ ಬಾರಿ ಪಾಕಿಸ್ತಾನ ತನ್ನ ಎರಡು ಪಂದ್ಯಗಳನ್ನ ಈಡನ್ ಗಾರ್ಡನ್‌ನಲ್ಲಿ ಆಡಲಿದೆ. ಈ ಪಂದ್ಯಗಳು ಅತ್ಯಂತ ಕಠಿಣವಾಗಿರಲಿವೆ. ಈಗಾಗಲೇ ಐಪಿಎಲ್‌ನಲ್ಲಿ ಅತಿಹೆಚ್ಚು ಪ್ರೇಕ್ಷಕರನ್ನ ಈ ಅಂಗಳದಲ್ಲಿ ಕಂಡಿರುವುದರಿಂದ ಯಾವುದೇ ರೀತಿಯ ಸವಾಲುಗಳನ್ನು ನಾವು ಎದುರಿಸಲು ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ.
ಈ ಪಂದ್ಯಗಳನ್ನು ಆಯೋಜಿಸುವ ಬಗ್ಗೆ ನನಗೆ ತುಂಬಾ ವಿಶ್ವಾಸವಿದೆ. ಪಾಕಿಸ್ತಾನ ತಂಡಕ್ಕೆ ವಿಶೇಷ ಭದ್ರತಾ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಈ ಹಿಂದೆಯೂ ಪಾಕ್ ತಂಡ ಕೋಲ್ಕತ್ತಾದಲ್ಲಿ ಆಡಿದೆ. ಮೊದಲ ಆದ್ಯತೆ ಕೋಲ್ಕತ್ತಾಗೆ ನೀಡಲಿದ್ದು, ನಂತರದಲ್ಲಿ ಚೆನ್ನೈ ಹಾಗೂ ಬೆಂಗಳೂರು ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯಗಳಿಗೆ ಭದ್ರತೆ ಒದಗಿಸಲಾಗುತ್ತದೆ ಎಂದು ಅವರು ಭರವಸೆ ನೀಡಿದ್ದಾರೆ. ಇದನ್ನೂ ಓದಿ: ICC ODI World Cup 2023: ಏಕದಿನ ವಿಶ್ವಕಪ್ ವೇಳಾಪಟ್ಟಿ ಪ್ರಕಟ
ಸಿಎಂ ಮಮತಾ ಬ್ಯಾನರ್ಜಿ ಹಾಗೂ ಕೋಲ್ಕತ್ತಾ ಪೊಲೀಸರ ಮೇಲೆ ನನಗೆ ನಂಬಿಕೆಯಿದೆ. ಸಾಮಾನ್ಯ ಪಂದ್ಯಗಳಿಗಿಂತ ಹೆಚ್ಚಿನ ಭದ್ರತಾ ವ್ಯವಸ್ಥೆಯನ್ನು ಈ ಪಂದ್ಯಗಳಿಗೆ ಒದಗಿಸಲಿದ್ದಾರೆ ಎಂದು ಶ್ಲಾಘಿಸಿದ್ದಾರೆ.
Web Stories