ಬೆಳಗಾವಿ: ಟಿಕ್‍ಟಾಕ್ ಮಾಡಲು ಕ್ಯಾಮೆರಾ, ಲ್ಯಾಪ್ ಟಾಪ್, ಶೋಕಿಗಾಗಿ ಬೈಕ್ ಕಳ್ಳತನ ಮಾಡಿದ್ದ ಮೂವರು ವಿದ್ಯಾರ್ಥಿಗಳು ಅಂದರ್ ಆದ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಪದವಿ ಓದುತ್ತಿರುವ ವಿದ್ಯಾರ್ಥಿಗಳಾದ ಸಂತೋಷ್, ಸಂಪತ್, ಮತ್ತೊಬ್ಬ ವಿದ್ಯಾರ್ಥಿ ಪ್ರತಿದಿನವೂ ಮೊಬೈಲ್‍ನಲ್ಲಿ ಟಿಕ್‍ಟಾಕ್ ಮಾಡಿ ಅಪ್‍ಲೋಡ್ ಮಾಡುತ್ತಿದ್ದರು. ಅಂದುಕೊಂಡ ಮಟ್ಟಿಗೆ ಲೈಕ್ ಕಮೆಂಟ್ ಬಾರದ್ದಕ್ಕೆ ತಮ್ಮ ವರಸೆ ಬದಲಿಸಿದ ಮೂವರು ಸೋಷಿಯಲ್ ಮೀಡಿಯಾದಲ್ಲಿ ಹವಾ ಸೃಷ್ಟಿಸಲು, ಹುಡುಗಿಯರನ್ನು ಇಂಪ್ರೆಸ್ ಮಾಡಲು ಪ್ಲಾನ್ ಮಾಡಿದ್ದರು. ಫೋಟೋ ಸ್ಟುಡಿಯೋ ಒಂದಕ್ಕೆ ನುಗ್ಗಿ ಅಲ್ಲಿದ್ದ ಹೈಕ್ವಾಲಿಟಿ ಕ್ಯಾಮೆರಾ, ಲ್ಯಾಪ್ ಟಾಪ್ ಕದ್ರು. ಬಳಿಕ ಶೋಕಿ ಮಾಡಬೇಕೆಂದು 7 ಮನೆಗಳಲ್ಲಿ ಕಳ್ಳತನ ಮಾಡಿದ್ದರು. ಇದನ್ನೂ ಓದಿ: ಮೋರಿ ನೀರಿನಲ್ಲಿ ಶತ್ರುವನ್ನು ಹುಡುಕಿದ ಪಬ್‍ಜಿ ವೀರ
Advertisement
Advertisement
ವಿದ್ಯಾರ್ಥಿಗಳು ಕಳ್ಳತನ ಮಾಡಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು, ಈ ದೃಶ್ಯ ಆಧರಿಸಿ ಪೊಲೀಸರು ಮೂವರು ವಿದ್ಯಾರ್ಥಿಗಳನ್ನು ಬಂಧಿಸಿ ಒಂದು ಲ್ಯಾಪ್ ಟಾಪ್ ಮೂರು ಕ್ಯಾಮೆರಾ, ಕಿಬೋರ್ಡ್, ಮೆಮೋರಿ ಕಾರ್ಡ್, ಒಂದು ಬೈಕ್ ಹಾಗೂ ಕಾಸ್ಟ್ಯೂಮ್ ಮತ್ತು 1.16 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಪಬ್‍ಜಿ ಕೊಲೆ ಪ್ರಕರಣ – ತರಕಾರಿ ಕತ್ತರಿಸಿದಂತೆ ತಂದೆಯ ರುಂಡ, ಕಾಲು ಕತ್ತರಿಸಿದ ಮಗ
Advertisement
ಬೆಳಗಾವಿ ನಗರದಲ್ಲಿ ಕೆಲವು ದಿನಗಳಿಂದ ಕಳ್ಳತನ ಪ್ರಕರಣಗಳು ಹೆಚ್ಚಾಗಿದ್ದವು. ಹಾಗಾಗಿ ಪ್ರಕರಣ ಬೇಧಿಸಲು ವಿಶೇಷ ತಂಡಗಳನ್ನು ರಚನೆ ಮಾಡಲಾಗಿತ್ತು. ಪೊಲೀಸರು ಯಶಸ್ವಿಯಾಗಿದ್ದು, ಓರ್ವ ಅಪ್ರಾಪ್ತ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಕಳ್ಳತನ ಮಾಡಿದ್ದ ಎಲ್ಲ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಮೂವರ ಬಂಧನದಿಂದಾಗಿ ಏಳು ಪ್ರಕರಣಗಳು ಬೆಳಕಿಗೆ ಬಂದಿವೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಯುವಕರು ಮೊಬೈಲ್ ಬಳಕೆಯ ಬಗ್ಗೆ ಎಚ್ಚರಿಕೆಯಿಂದಿರಬೇಕು. ಪಬ್ ಜಿ ಮತ್ತು ಟಿಕ್ ಟಾಕ್ ಆಟಗಳಿಗೆ ಬಲಿಯಾಗಬಾರದು. ಸೋಶಿಯಲ್ ಮೀಡಿಯಾದಲ್ಲಿ ಆಟಗಳಿಗೆ ದಾಸರಾದ್ರೆ ಹಣಕ್ಕಾಗಿ ಕಳ್ಳತನಕ್ಕೆ ಇಳಿಯುತ್ತಾರೆ. ಹಾಗಾಗಿ ಪೋಷಕರು ತಮ್ಮ ಮಕ್ಕಳ ಚಲನವಲನಗಳನ್ನು ಗಮನಿಸಬೇಕು ಎಂದು ನಗರ ಪೊಲೀಸ್ ಆಯುಕ್ತರಾದ ಲೋಕೇಶ್ ಕುಮಾರ್ ಸಲಹೆ ನೀಡಿದ್ದಾರೆ. ಇದನ್ನೂ ಓದಿ:ಪಬ್‍ಜಿ ಆಡಲು ನೆಟ್ ಪ್ಯಾಕ್‍ಗೆ ಹಣ ನೀಡದ್ದಕ್ಕೆ ತಂದೆಯನ್ನೇ ಕತ್ತರಿಸಿ ಕೊಂದ ಮಗ
Advertisement