ತುಮಕೂರು: ಬ್ರಿಗೇಡ್ ಸಭೆಗಳನ್ನ ನಡೆಸಬಾರದು ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಮುರುಳೀಧರ್ ರಾವ್ ಖಡಕ್ ಆದೇಶದ ಮಧ್ಯೆಯೂ ರಾಯಣ್ಣ ಬ್ರಿಗೇಡ್ ನಾಯಕ ಕೆ.ಎಸ್ ಈಶ್ವರಪ್ಪ ತುಮಕೂರಲ್ಲಿ ಮತ್ತೆ ಸಭೆ ನಡೆಸಿದ್ದಾರೆ.
Advertisement
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಬಿಎಸ್‍ವೈ ನನ್ನ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ ಎಂದು ತುಂಬ ವರ್ಷಗಳಿಂದ ಹೇಳುತ್ತಿದ್ದಾರೆ. ಆದರೆ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಯಡಿಯೂರಪ್ಪ ಪಕ್ಷ ತೊರೆದ ಸಂದರ್ಭದಲ್ಲಿ ನಾನು ಸಚಿವ ಸ್ಥಾನ ತ್ಯಜಿಸಿ ಪಕ್ಷದ ರಾಜ್ಯಾಧ್ಯಕ್ಷನಾದೆ. ಅಂತಹ ಸಂದರ್ಭದಲ್ಲಿ ಪಕ್ಷದ ಹೊಣೆ ಹೊತ್ತು ಸಂಘಟನೆ ಮಾಡಿದ್ದೆ. ಹಾಗಾಗಿ ನನ್ನ ವಿರುದ್ಧ ಕ್ರಮ ಕೈಗೊಳ್ಳುವ ಪ್ರಶ್ನೆಯೇ ಉದ್ಭವಿಸಲ್ಲ ಎಂತಾ ಕೆ.ಎಸ್ ಈಶ್ವರಪ್ಪ ಚಾಟಿ ಬೀಸಿದ್ದಾರೆ.
Advertisement
Advertisement
ಹೈಕಮಾಂಡ್ ವಿರುದ್ಧವೇ ಕೆಂಡಾಮಂಡಲವಾಗಿದ್ದಾರೆ. ರಾಜ್ಯ ಬಿಜೆಪಿ ಉಸ್ತುವಾರಿ ಮುರುಳೀಧರ್ ರಾವ್ ಅವರಿಗೆ ನನ್ನ ವಿರುದ್ಧ ಕ್ರಮ ಕೈಗೊಳ್ಳುವ ಪ್ರಶ್ನೆಯೇ ಉದ್ಭವಿಸಲ್ಲ. ನನ್ನ ವಿರುದ್ಧ ಕ್ರಮ ಕೈಗೊಳ್ಳುತ್ತಾರೆ ಅನ್ನೋದನ್ನು ಯಾರೋ ಹುಟ್ಟುಹಾಕಿದ್ದಾರೆ. ಭಾನುಪ್ರಕಾಶ್ ವಿರುದ್ಧ ಕ್ರಮ ಕೈಗೊಂಡಿರುವುದು ಮನಸ್ಸಿಗೆ ನೋವುಂಟು ಮಾಡಿದೆ ಅಂತಾ ಹೇಳಿದ್ರು.