ಟಾಲಿವುಡ್‌ನ ಸದ್ಯದ ಬ್ಯೂಟಿಫುಲ್ ಜೋಡಿ ಅಂದರೆ ಅನುಪಮಾ ಪರಮೇಶ್ವರನ್- ಸಿದ್ದು ಜೊನ್ನಲಗಡ್ಡ (Siddu Jonnalagadda) ಪೇರ್. ‘ಟಿಲ್ಲು ಸ್ಕ್ವೇರ್’ (Tillu Square) ಚಿತ್ರ ಇಬ್ಬರೂ ಸದ್ದು ಮಾಡ್ತಿದ್ದಾರೆ. ಸದ್ಯ ‘ಓ ಮೈ ಲಿಲ್ಲಿ’ (Oh My Lily) ಅಂತ ಅನುಪಮಾ ಜೊತೆ ಸಿದ್ದು ರೊಮ್ಯಾನ್ಸ್ ಮಾಡಿದ್ದಾರೆ.
‘ಟಿಲ್ಲು ಸ್ಕ್ವೇರ್’ ಸಿನಿಮಾ ರಿಲೀಸ್‌ಗೂ ಮುನ್ನವೇ ಸಿಕ್ಕಾಪಟ್ಟೆ ಹವಾ ಕ್ರಿಯೇಟ್ ಮಾಡಿದೆ. ಕೆಲ ದಿನಗಳ ಹಿಂದೆ ಟ್ರೈಲರ್‌ನಿಂದ ಎಲ್ಲರ ಗಮನ ಸೆಳೆದಿತ್ತು. ಈಗ ರೊಮ್ಯಾಂಟಿಕ್ ಸಾಂಗ್‌ನಿಂದ ಪ್ರೇಕ್ಷಕರಿಗೆ ಕಿಕ್ ಕೊಡುತ್ತಿದೆ. ಸಿದ್ದು ಜೊತೆ ಸಿಕ್ಕಾಪಟ್ಟೆ ಬೋಲ್ಡ್ ಆಗಿ ಅನುಪಮಾ (Anupama Parameshwaran) ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ:ಜೊತೆಯಾಗಿ ಕಾಣಿಸಿಕೊಂಡ್ರು ಉಪೇಂದ್ರ, ಶಿಲ್ಪಾ ಶೆಟ್ಟಿ, ಧ್ರುವ, ಮಾಲಾಶ್ರೀ- ಏನು ಸಮಾಚಾರ?
‘ಓ ಮೈ ಲಿಲ್ಲಿ’ ಸಾಂಗ್ ರಿಲೀಸ್ ಆಗಿದೆ. ಸಿದ್ದು- ಅನುಪಮಾ ರೊಮ್ಯಾಂಟಿಕ್ ಆಗಿ ಕಾಣಿಸಿಕೊಂಡಿದ್ದಾರೆ. ಇಬ್ಬರೂ ಜೊತೆಯಾಗಿ ತುಣುಕು ನೋಡಿ ಪ್ರೇಕ್ಷಕರು ಫಿದಾ ಆಗಿದ್ದಾರೆ. ಪಡ್ಡೆಹುಡುಗರೆಲ್ಲಾ ಲಿಲ್ಲಿ ಗುಂಗಲ್ಲಿದ್ದಾರೆ. ಶ್ರೀರಾಮ್ ಚಂದ್ರಾ ಹಾಡಿಗೆ ಧ್ವನಿಯಾಗಿದ್ದಾರೆ. ಇದೇ ಮಾರ್ಚ್ 29ಕ್ಕೆ ಸಿನಿಮಾ ರಿಲೀಸ್ ಆಗುತ್ತಿದೆ.
View this post on Instagram
ಬೋಲ್ಡ್ ಪಾತ್ರಗಳಲ್ಲಿ ಮಾಡಲ್ಲ ಅಂತಿದ್ದ ಈ ನಟಿ ಟಿಲ್ಲು ಸ್ಕ್ವೇರ್ ಸಿನಿಮಾದಲ್ಲಿ ಬೋಲ್ಡ್ ಆಗಿ ನಟಿಸಿದ್ದಾರೆ. ಜೊತೆಗೆ ಲಿಪ್ ಲಾಕ್ ಕೂಡ ಮಾಡಿದ್ದಾರೆ. ಈ ಹಿಂದೆ ‘ರೌಡಿ ಬಾಯ್ಸ್’ ಸಿನಿಮಾದಲ್ಲಿ ಈ ರೀತಿಯ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದರೂ, ಅಭಿಮಾನಿಗಳಿಗೆ ಅಷ್ಟೇನೂ ಅವು ಮತ್ತೇರಿಸಿರಲಿಲ್ಲ.
ಟಿಲ್ಲು ಸ್ಕ್ವೇರ್ ಸ್ವೀಕೆಲ್ ಸಿನಿಮಾ. ಈ ಹಿಂದೆ 2022ರಲ್ಲಿ ಬಿಡುಗಡೆಯಾಗಿದ್ದ ‘ಡಿಜೆ ಟಿಲ್ಲು’ ಸಿನಿಮಾದ ಮುಂದುವರೆದ ಭಾಗ ಇದಾಗಿದೆ. ‘ಟಿಲ್ಲು ಸ್ಕ್ವೇರ್’ ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು ಅನುಪಮಾ ಅಚ್ಚರಿ ಎನ್ನುವಂತೆ ಬೋಲ್ಡ್ ಸ್ಟೆಪ್ ಇಟ್ಟಿದ್ದಾರೆ. ಈ ಸಿನಿಮಾವನ್ನು ಮಲ್ಲಿಕ್ ರಾಮ್ ನಿರ್ದೇಶನ ಮಾಡಿದ್ದು, ಸೂರ್ಯದೇವರ ನಾಗ್ ವಂಶಿ ನಿರ್ಮಾಣ ಮಾಡಿದ್ದಾರೆ.
ಅನುಪಮಾ ಈ ಹಿಂದೆ ಈಗಲ್ ಸಿನಿಮಾದಲ್ಲಿ ನಟಿಸಿದ್ದರು. ಆ ಸಿನಿಮಾ ಸೂಪರ್ ಹಿಟ್ ಆಗಿತ್ತು. ಈ ಬೆನ್ನಲ್ಲೆ ಟಿಲ್ಲು ಸ್ಕ್ವೇರ್ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ.