ಅಸ್ಸಾಂ, ಮೇಘಾಲಯ ಗಡಿಯಲ್ಲಿ ಮರ ಕಳ್ಳಸಾಗಣೆ – ಘರ್ಷಣೆಯಲ್ಲಿ ಅರಣ್ಯ ಸಿಬ್ಬಂದಿ ಸೇರಿ 6 ಸಾವು

Public TV
1 Min Read
Assam Meghalaya

ಶಿಲ್ಲಾಂಗ್/ದಿಸ್ಪುರ್: ಅಸ್ಸಾಂ-ಮೇಘಾಲಯ ಗಡಿಯಲ್ಲಿ ಮಂಗಳವಾರ ಮುಂಜಾನೆ ಮರವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಟ್ರಕ್ ಅನ್ನು ಪೊಲೀಸರು ತಡೆದಿದ್ದಾರೆ. ಘಟನೆಯ ಬಳಿಕ ಗಡಿ ಪ್ರದೇಶದಲ್ಲಿ ಘರ್ಷಣೆ ನಡೆದಿದ್ದು, ಘಟನೆಯಲ್ಲಿ ಅರಣ್ಯ ಸಿಬ್ಬಂದಿ ಸೇರಿದಂತೆ 6 ಜನರು ಸಾವನ್ನಪ್ಪಿದ್ದಾರೆ.

ಘರ್ಷಣೆಯ ಬಳಿಕ ಮೇಘಾಲಯ ಸರ್ಕಾರ 7 ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆಗಳನ್ನು 48 ಗಂಟೆಗಳ ಕಾಲ ಸ್ಥಗಿತಗೊಳಿಸಿದೆ.

ವರದಿಗಳ ಪ್ರಕಾರ, ಮೇಘಾಲಯದ ಗಡಿಯಾದ ಪಶ್ಚಿಮ ಕರ್ಬಿ ಆಂಗ್ಲಾಂಗ್ ಜಿಲ್ಲೆಯ ಮೊಯಿಕ್ರಾಂಗ್‌ನಲ್ಲಿ ಅಸ್ಸಾಂ ಅರಣ್ಯ ಇಲಾಖೆಯ ತಂಡ ಮುಂಜಾನೆ 3 ಗಂಟೆ ವೇಳೆಗೆ ಟ್ರಕ್ ಒಂದನ್ನು ತಡೆದಿದೆ. ಟ್ರಕ್‌ನಲ್ಲಿದ್ದವರು ಈ ವೇಳೆ ಪರಾರಿಯಾಗಲು ಪ್ರಯತ್ನಿಸಿದ್ದಾರೆ. ಅವರನ್ನು ತಡೆ ಹಿಡಿಯಲು ಅರಣ್ಯ ಸಿಬ್ಬಂದಿ ಗುಂಡು ಹಾರಿಸಿ ಟ್ರಕ್‌ನ ಟೈರ್ ಪಂಕ್ಚರ್ ಮಾಡಿದ್ದಾರೆ.

Assam Meghalaya 1 1

ಬಳಿಕ ಅರಣ್ಯ ಸಿಬ್ಬಂದಿ ಟ್ರಕ್‌ನಲ್ಲಿದ್ದ ಮೂವರನ್ನು ಬಂಧಿಸಿ, ಜಿರಿಕಿಂಡಿಂಗ್‌ಗೆ ಕರೆತಂದಿದ್ದಾರೆ. ಘಟನೆಯ ಬಗ್ಗೆ ಅರಣ್ಯ ಸಿಬ್ಬಂದಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಹೆಚ್ಚಿನ ಅಧಿಕಾರಿಗಳನ್ನು ಘಟನಾ ಸ್ಥಳಕ್ಕೆ ಕಳುಹಿಸಲಾಗಿದೆ. ಇದನ್ನೂ ಓದಿ: ಶಾರೀಕ್‌ ಬಳಿಯಿದ್ದ ಕುಕ್ಕರ್‌ ಬಾಂಬ್‌ಗೆ ಬಸ್ಸನ್ನೇ ಸ್ಫೋಟಿಸುವ ಸಾಮರ್ಥ್ಯ ಇತ್ತು

ಇದೆಲ್ಲದರ ಬಳಿಕ ಮುಂಜಾನೆ ಸುಮಾರು 5 ಗಂಟೆಯ ವೇಳೆಗೆ ಮೇಘಾಲಯದಿಂದ ಅಪಾರ ಸಂಖ್ಯೆಯ ಜನರು ಕಠಾರಿ ಹಾಗೂ ಇತರ ಶಸ್ತ್ರಾಸ್ತ್ರಗಳನ್ನು ಹಿಡಿದುಕೊಂಡು ಘಟನಾ ಸ್ಥಳಕ್ಕೆ ಬಂದಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರ ತಂಡ ಆತ್ಮರಕ್ಷಣೆಗಾಗಿ ಗುಂಡಿನ ದಾಳಿ ನಡೆಸಿದ್ದಾರೆ. ಈ ಘರ್ಷಣೆಯಲ್ಲಿ ಅರಣ್ಯ ಸಿಬ್ಬಂದಿ ಸೇರಿದಂತೆ 6 ಜನರು ಸಾವನ್ನಪ್ಪಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ವಿವರಿಸಿದ್ದಾರೆ.

ಮೃತ ಅರಣ್ಯ ಸಿಬ್ಬಂದಿಯನ್ನು ಬಿದ್ಯಾ ಸಿಂಗ್ ಲೆಹ್ತ್ ಎಂದು ಗುರುತಿಸಲಾಗಿದೆ. ಮತ್ತೊಬ್ಬ ಅರಣ್ಯ ಸಿಬ್ಬಂದಿ ಅಭಿಮನ್ಯು ಗಾಯಗೊಂಡಿದ್ದಾರೆ. ಪರಿಸ್ಥಿತಿ ಸದ್ಯ ನಿಯಂತ್ರಣಕ್ಕೆ ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: 71 ಸಾವಿರ ಉದ್ಯೋಗಾಕಾಂಕ್ಷಿಗಳಿಗೆ ನೇಮಕಾತಿ ಪತ್ರ ವಿತರಿಸಿದ ಮೋದಿ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *