CinemaKarnatakaLatestMain PostSandalwood

ಜನಾರ್ದನ ರೆಡ್ಡಿ ಪುತ್ರ ಕಿರೀಟಿ ಸಿನಿಮಾದ ಟೈಟಲ್ ಲಾಂಚ್ ಗೆ ಮುಹೂರ್ತ ಫಿಕ್ಸ್

ಜನಾರ್ದನ ರೆಡ್ಡಿ (Janardhan Reddy) ಪುತ್ರ ಕಿರೀಟಿ  ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದಾಗಿದೆ. ಅದ್ಧೂರಿಯಾಗಿ ನಡೆದ ಚಿತ್ರದ ಮುಹೂರ್ತ ಕಾರ್ಯಕ್ರಮದಲ್ಲಿ ಎಸ್ ಎಸ್ ರಾಜಮೌಳಿ ಕಿರೀಟಿಗೆ ಸಾಥ್ ನೀಡಿ ಪ್ರೋತ್ಸಾಹಿಸಿದ್ದು ಗೊತ್ತೇ ಇದೆ. ಇಂಟ್ರಡಕ್ಷನ್ ಟೀಸರ್ ಮೂಲಕ ಗಮನ ಸೆಳೆದಿರೋ ಕಿರೀಟಿ ಒಂದೇ ನೋಟಕ್ಕೆ ಎಲ್ಲರನ್ನು ಸೆಳೆದಿದ್ದಾರೆ. ಸ್ಯಾಂಡಲ್ ವುಡ್ ಅಂಗಳಕ್ಕೆ ಭರವಸೆಯ ನಾಯಕ ನಟನಾಗುತ್ತಾನೆ ಎಂಬ ಭವಿಷ್ಯ ವಾಣಿಯೂ ಕೇಳಿ ಬಂದಿವೆ. ಎಲ್ಲರ ಪ್ರೋತ್ಸಾಹದ ನುಡಿಗಳೊಂದಿಗೆ ಯಂಗ್ ಅಂಡ್ ಎನರ್ಜಿಟಿಕ್ ಕಿರೀಟಿ ಮೊದಲ ಚಿತ್ರದ ಚಿತ್ರೀಕರಣದಲ್ಲಿ ಫುಲ್ ಬ್ಯುಸಿಯಾಗಿದ್ದಾರೆ. ಸದ್ಯ ಕಿರೀಟಿ ಮೊದಲ ಚಿತ್ರದಿಂದ ಲೇಟೆಸ್ಟ್ ಅಪ್ ಡೇಟ್ ಹೊರಬಿದ್ದಿದೆ. ಅದುವೇ ಚಿತ್ರದ ಟೈಟಲ್.

ಎಸ್. ಕಿರೀಟಿ (Kiriti) ಗ್ರ್ಯಾಂಡ್ ಆಗಿ ಎಂಟ್ರಿ ಕೊಟ್ಟು ಚಿತ್ರೀಕರಣದಲ್ಲಿ ತೊಡಗಿದ್ರು ಕೂಡ ಇಲ್ಲಿವರೆಗೂ ಸಿನಿಮಾದ ಟೈಟಲ್ ಅನಾವರಣ ಆಗಿರಲಿಲ್ಲ. ಫೈನಲಿ ಸಿನಿಮಾ ತಂಡ ಟೈಟಲ್ (Title) ರಿವೀಲ್ ಮಾಡಲು ಪ್ಲ್ಯಾನ್ ಮಾಡಿಕೊಂಡಿದೆ. ಅದು ಒಂದು ವಿಶೇಷ ದಿನದಂದೂ. ಆ ವಿಶೇಷ ದಿನ ಏನು ಅನ್ನೋದನ್ನ ಮಾತ್ರ ಚಿತ್ರತಂಡ ಇಲ್ಲಿವರೆಗೂ ರಿವೀಲ್ ಮಾಡಿಲ್ಲ. ಸದ್ಯಕ್ಕಿರುವ ಮಾಹಿತಿ ಪ್ರಕಾರ ಕಿರೀಟಿ ಅವರ ಹುಟ್ಟು ಹಬ್ಬಕ್ಕಾಗಿ ಸೆಪ್ಟೆಂಬರ್ 29ಕ್ಕೆ ಸಂಜೆ  6.39ಕ್ಕೆ ವಾರಾಹಿ ಚಲನಚಿತ್ರ ಯೂಟ್ಯೂಬ್ ಚಾನೆಲ್ ನಲ್ಲಿ ಕಿರೀಟಿ ಮೊದಲ ಚಿತ್ರದ ಟೈಟಲ್ ಲಾಂಚ್ ವೀಡಿಯೋ ಬಿಡುಗಡೆಯಾಗೋದು ಫಿಕ್ಸ್ ಆಗಿದೆ. ಇದನ್ನೂ ಓದಿ: ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಆಸ್ಪತ್ರೆ ದಾಖಲು: ಅಭಿಮಾನಿಗಳಿಗೆ ಹೆಚ್ಚಿದೆ ಆತಂಕ

ರಾಧಾಕೃಷ್ಣ ರೆಡ್ಡಿ (Radhakrishna Reddy) ನಿರ್ದೇಶನ ಸಾರಥ್ಯದಲ್ಲಿ ಮೂಡಿ ಬರ್ತಿರುವ ಈ ಚಿತ್ರಕ್ಕೆ ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆ ವಾರಾಹಿ ಫಿಲ್ಮಂ ಪ್ರೊಡಕ್ಷನ್ ಬಂಡವಾಳ ಹೂಡಿ ನಿರ್ಮಾಣ ಮಾಡುತ್ತಿದೆ. ಇದು ವಾರಾಹಿ ಸಂಸ್ಥೆಯ 15ನೇ ಸಿನಿಮಾ ಕೂಡ ಆಗಿದ್ದು ಅಷ್ಟೇ ಅದ್ದೂರಿಯಾಗಿ ಸಿನಿಮಾವನ್ನು ನಿರ್ಮಾಣ ಮಾಡಲಾಗುತ್ತಿದೆ. ಕನ್ನಡ ಮತ್ತು ತೆಲುಗು ಎರಡೂ ಭಾಷೆಯಲ್ಲಿ  ನಿರ್ಮಾಣವಾಗುತ್ತಿರೋ ಈ ಚಿತ್ರದ ಮೂಲಕ ಕಿರೀಟಿ ಕನ್ನಡ ಮತ್ತು ತೆಲುಗು ಎರಡೂ ಇಂಡಸ್ಟ್ರಿಗೆ ಏಕಕಾಲದಲ್ಲಿ ಹೀರೋ ಆಗಿ ಲಾಂಚ್ ಆಗ್ತಿದ್ದಾರೆ.

ಚಿತ್ರದಲ್ಲಿ ರವಿಚಂದ್ರನ್ (Ravichandran), ಜೆನಿಲಿಯಾ ರಿತೇಶ್ ದೇಶ್ ಮುಖ್, ಶ್ರೀಲೀಲಾ ಸೇರಿದಂತೆ ದೊಡ್ಡ ತಾರಾಬಳಗವೇ  ಇದೆ. ಚಿತ್ರದ ತಾಂತ್ರಿಕ ವರ್ಗ ಕೂಡ ಶ್ರೀಮಂತವಾಗಿದ್ದು ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ, ಬಾಹುಬಲಿ ಸಿನಿಮಾದ ಕಣ್ಣು ಕೆ ಸೆಂಥಿಲ್ ಕುಮಾರ್ ಛಾಯಾಗ್ರಹಣ, ರವೀಂದರ್ ಕಲಾ ನಿರ್ದೇಶನ, ಭಾರತದ ಟಾಪ್ ಸ್ಟಂಟ್ ಡೈರೆಕ್ಟರ್ ಪೀಟರ್ ಹೆನ್ ಆಕ್ಷನ್ ಚಿತ್ರಕ್ಕಿದೆ.

Live Tv

Leave a Reply

Your email address will not be published. Required fields are marked *

Back to top button