ಅಹಮದಾಬಾದ್: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (Congress) ಅನ್ನು ವಿಸರ್ಜಿಸುವ ಮಹಾತ್ಮ ಗಾಂಧಿಯವರ (Mahatma Gandhi) ಕನಸನ್ನು ನನಸಾಗಿಸುವ ಸಮಯ ಬಂದಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಹೇಳಿದ್ದಾರೆ. ಗುಜರಾತ್‌ನಲ್ಲಿ (Gujarat) ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಪೋರಬಂದರ್‌ನಲ್ಲಿ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಯೋಗಿ, ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ಕೊರೊನ ಸಾಂಕ್ರಾಮಿಕ ಸಮಯದಲ್ಲಿ ಚಿಕಿತ್ಸೆ ಮತ್ತು ಲಸಿಕೆಗಾಗಿ ಮೀಸಲಾದ ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿತ್ತು. ಬಿಕ್ಕಟ್ಟಿನ ಸಂದರ್ಭದಲ್ಲಿ ಕಾಂಗ್ರೆಸ್ ಎಂದಿಗೂ ಜನರೊಂದಿಗೆ ನಿಲ್ಲುವುದಿಲ್ಲ ಎಂದು ಹೇಳಿದರು.
Advertisement
Advertisement
ಭಾರತಕ್ಕೆ ಸ್ವಾತಂತ್ರ‍್ಯ ಬಂದ ನಂತರ ಕಾಂಗ್ರೆಸ್ ಪಕ್ಷವನ್ನು ವಿಸರ್ಜಿಸಬೇಕೆಂದು ಗಾಂಧಿ ಸೂಚಿಸಿದ್ದರು. ಅಧಿಕಾರದ ಲಾಲಸೆಗೆ ಅದನ್ನು ಮುಂದುವರಿಸಲಾಯಿತು. ಆದರೆ ಕಾಂಗ್ರೆಸ್ ಎಂದೂ ಜನಪರ ಕೆಲಸ ಮಾಡಲಿಲ್ಲ. ಕಾಂಗ್ರೆಸ್‌ಗಿಂತ ಭಿನ್ನವಾಗಿ ಬಿಜೆಪಿ ಯಾವಾಗಲೂ ತನ್ನ ಭರವಸೆಗಳನ್ನು ಈಡೇರಿಸುತ್ತ ಬಂದಿದೆ ಎಂದರು. ಇದನ್ನೂ ಓದಿ: ಪ್ರಧಾನಿ ಪಕ್ಕ ಕುಳಿತು ಬಿಜೆಪಿಯನ್ನು ಹಾಡಿ ಹೊಗಳಿದ ಬಾಲಕಿ – ಶಭಾಶ್ ಅಂದ ಮೋದಿ
Advertisement
ಬಿಜೆಪಿಗೆ ಜನರು ಅಭೂತಪೂರ್ವ ಬೆಂಬಲ ನೀಡುತ್ತಿದ್ದಾರೆ. ಹೀಗಾಗಿ ಬಾಪು ಅವರ ಕಾಂಗ್ರೆಸ್ ಅನ್ನು ವಿಸರ್ಜಿಸುವ ಕನಸು ನನಸಾಗುವ ಸಮಯ ಬಂದಿದೆ ಎಂದು ಅವರು ಹೇಳಿದರು.
Advertisement
ಯೋಗಿ ಆದಿತ್ಯನಾಥ್ ಅವರು ಪಕ್ಷದ ಅಭ್ಯರ್ಥಿ ಬಾಬುಭಾಯಿ ಬೋಖಿರಿಯಾ ಪರ ಗುಜರಾತ್‌ನಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಗುಜರಾತ್‌ನ 182 ವಿಧಾನಸಭಾ ಸ್ಥಾನಗಳಿಗೆ ಡಿಸೆಂಬರ್ 1 ಮತ್ತು 5 ರಂದು 2 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ. ಇದನ್ನೂ ಓದಿ: ಜೈಲಿನಲ್ಲಿ ಸತ್ಯೇಂದ್ರ ಜೈನ್‍ಗೆ ಮಾಡಿದ್ದು ಮಸಾಜ್ ಅಲ್ಲ, ಫಿಸಿಯೋಥೆರಪಿ – ಬಿಜೆಪಿಗೆ ಕೇಜ್ರಿವಾಲ್ ತಿರುಗೇಟು