ಬೆಂಗಳೂರು: ಲೋಕಸಭಾ ಚುನಾವಣೆಯ ಮತದಾನ ಕಾರ್ಯ ಮುಕ್ತಾಯವಾಗುತ್ತಿದಂತೆ ದೇಶದ ವಿವಿಧ ಮಾಧ್ಯಮಗಳು ಚುನಾಣೋತ್ತರ ಸಮೀಕ್ಷೆಗಳನ್ನು ಬಿಡುಗಡೆ ಮಾಡಿದ್ದು ಸಿ ವೋಟರ್ ನಂತೆ ಟೈಮ್ಸ್ ನೌ ಸಹ ಕೇಂದ್ರದಲ್ಲಿ ಎನ್‍ಡಿಎ ಸರ್ಕಾರ ಮತ್ತೆ ಅಧಿಕಾರಕ್ಕೆ ಏರಲಿದೆ ಎಂದು ಭವಿಷ್ಯ ನುಡಿದಿದೆ.
ರಾಷ್ಟ್ರೀಯ ವಾಹಿನಿ ಟೈಮ್ಸ್ ನೌ ಎನ್‍ಡಿಎ 306 ಕ್ಷೇತ್ರಗಳು, ಯುಪಿಎ 132 ಹಾಗೂ ಇತರೇ 104 ಸ್ಥಾನಗಳನ್ನು ಪಡೆಯಲಿದೆ ಎಂದು ತಿಳಿಸಿದೆ.
Advertisement
ಕರ್ನಾಟಕದಲ್ಲೂ ಕಮಲ ಪ್ರಭಾವ ಹೆಚ್ಚಾಗಿದ್ದು, ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿಗೆ 21, ಕಾಂಗ್ರೆಸ್-ಜೆಡಿಎಸ್‍ಗೆ 07 ಹಾಗೂ ಸ್ಥಾನ ಪಡೆಯಲಿದೆ ಎಂದು ಸಮೀಕ್ಷೆ ತಿಳಿಸಿದೆ.
Advertisement
Advertisement
ಸಿ ವೋಟರ್ ಸಮೀಕ್ಷೆಯ ಪ್ರಕಾರ ಬಿಜೆಪಿ ನೇತೃತ್ವದ ಎನ್‍ಡಿಎ 287, ಕಾಂಗ್ರೆಸ್ ನೇತೃತ್ವದ ಯುಪಿಎ 128, ಇತರರು 127 ಸ್ಥಾನಗಳನ್ನು ಗಳಿಸಲಿದೆ ಎಂದು ಹೇಳಿದೆ. ಕರ್ನಾಟಕದಲ್ಲಿ ಬಿಜೆಪಿ 18, ಕಾಂಗ್ರೆಸ್ 7, ಜೆಡಿಎಸ್ 2 ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದೆ.
Advertisement
2014ರ ಚುನಾವಣೆಯಲ್ಲಿ ಎನ್‍ಡಿಎ 334, ಯುಪಿಎ 59, ಇತರರು 150 ಸ್ಥಾನಗಳನ್ನು ಗೆದ್ದಿತ್ತು. ಕರ್ನಾಟಕದಲ್ಲಿ ಬಿಜೆಪಿ 17, ಕಾಂಗ್ರೆಸ್ 9, ಜೆಡಿಎಸ್ 2 ಸ್ಥಾನಗಳನ್ನು ಗೆದ್ದುಕೊಂಡಿತ್ತು.