ಚಿಕ್ಕಬಳ್ಳಾಪುರ: ಹೆದ್ದಾರಿಯಲ್ಲಿಯೇ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಟಿಪ್ಪರ್‍ವೊಂದು ಹೊತ್ತಿ ಉರಿದ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಕಲ್ಲಿನಾಯಕನಹಳ್ಳಿ ಗ್ರಾಮದ ಬಳಿ ನಡೆದಿದೆ.
ರಾಮಲಿಂಗಂ ಕನ್ಸ್ ಸ್ಟ್ರಕ್ಷನ್ ಸಂಸ್ಥೆಗೆ ಸೇರಿದ ಟಿಪ್ಪರ್ ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಟಿಪ್ಪರ್ ಹೆದ್ದಾರಿಯಲ್ಲಿ ಹೋಗುತ್ತಿದ್ದಂತೆ ಮೊದಲು ಮುಂಭಾಗದ ಇಂಜಿನ್‍ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಂತರ ಕೆಲ ಕ್ಷಣದಲ್ಲಿಯೇ ಟಿಪ್ಪರ್ ಹೊತ್ತಿ ಉರಿಯಲು ಆರಂಭಿಸಿದೆ.
ಇದನ್ನು ಗಮನಿಸಿದ ಚಾಲಕ ತಕ್ಷಣ ಟಿಪ್ಪರ್ ನಿಲ್ಲಿಸಿ ಸ್ಥಳೀಯರ ಸಹಕಾರದಿಂದ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಆದರೆ ಅಷ್ಟರಲ್ಲಿ ಟಿಪ್ಪರ್ ನ ಮುಂಭಾಗ ಸಂಪೂರ್ಣ ಸುಟ್ಟು ಕರಕಲಾಗಿದೆ. ಈ ಘಟನೆ ಮಂಚೇನಹಳ್ಳಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.