ಅವೈಜ್ಞಾನಿಕ ಡೈವರ್ಷನ್‍ಗೆ ಸವಾರ ಬಲಿ..!

Public TV
1 Min Read
KWR ACCIDENT AV 2 1

ಕಾರವಾರ: ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮುಟಾದ ಕಡೇಕೋಡಿ ಗ್ರಾಮದ ಬಳಿ ನಡೆದಿದೆ.

ತುಕಾರಾಂ ಪಟಗಾರ್ (30) ಮೃತಪಟ್ಟ ಬೈಕ್ ಸವಾರ. ಕಡೇಕೋಡಿ ಗ್ರಾಮದ ಬಳಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಟಿಪ್ಪರ್ ಲಾರಿಗೆ ಬೈಕ್ ಮುಖಾಮುಖಿ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ತುಕರಾಂ ಗಂಭೀರವಾಗಿ ಗಾಯಗೊಂಡು ಕುಸಿದು ಬಿದ್ದಿದ್ದಾರೆ. ಕೂಡಲೇ ಸ್ಥಳೀಯರು ಬೈಕ್ ಸವಾರನನ್ನು ಆಸ್ಪತೆಗೆ ದಾಖಲಿಸಿದ್ದರು. ಆದರೆ ಗಂಭೀರವಾಗಿ ಗಾಯಗೊಂಡಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

KWR ACCIDENT AV 1 1

ಟಿಪ್ಪರ್ ಲಾರಿ ಹೆದ್ದಾರಿ ಅಗಲೀಕರಣ ನಡೆಸುತ್ತಿರುವ ಐಆರ್‌ಬಿ ಕಂಪನಿಗೆ ಸೇರಿದ್ದಾಗಿದೆ. ಹೆದ್ದಾರಿ ಅಗಲೀಕರಣವನ್ನು ಪಡೆದಿದ್ದ ಐಆರ್‌ಬಿ ಕಂಪನಿ ಅವೈಜ್ಞಾನಿಕವಾಗಿ ಡೈವರ್ಷನ್ ಹಾಕಿದ್ದರಿಂದ ಅಪಘಾತ ಸಂಭವಿಸಿದೆ ಎಂದು ತಿಳಿಬಂದಿದೆ.

ವಿಷಯ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಕುಮುಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article