ಮಂಗಳೂರು: ಇಲ್ಲಿನ ಪಂಪ್‌ವೆಲ್‌ನಲ್ಲಿ (Pumpwell Accident) ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ನಿವಾಸಿ ಗೋಪಾಲ್ (29) ಮೃತ ಯುವಕ.
ರಾಷ್ಟ್ರೀಯ ಹೆದ್ದಾರಿ 66ರ ನಂತೂರು-ಪಂಪ್‌ವೆಲ್ ಸರ್ವಿಸ್ ರಸ್ತೆಯಲ್ಲಿ ಅಪಘಾತವಾಗಿದೆ. ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾನೆ.

